ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಆಟೋ ಪ್ರಯಾಣದ ದರಗಳನ್ನು ಪರಿಷ್ಕರಿಸಿದ್ದು, ಇಂದಿನಿಂದ ಹೊಸ ದರ ಜಾರಿಯಾಗಿದೆ.
ಬೆಂಗಳೂರು ನಗರ ಜಿಲ್ಲೆಯ ಪ್ರಾದೇಶಿಕ ಸಾರಿಗೆ ಪ್ರಾಧಿಕಾರವು ಆಟೋ ಮೀಟರ್ ದರ ಪರಿಷ್ಕರಣೆ ಮಾಡಿ ಆದೇಶ ಹೊರಡಿಸಿದ್ದು, ಆಟೋರಿಕ್ಷಾದಲ್ಲಿ ಮೂವರು ಪ್ರಯಾಣಿಕರಿಗೆ ಪ್ರಯಾಣಿಸಲು ಅವಕಾಶವಿದೆ.
ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ನಗರ ಜಿಲ್ಲಾಧಿಕಾರಿ ಅವರ ಆದೇಶದಂತೆ ಆಟೋದಲ್ಲಿ ಪ್ರಯಾಣಿಸುವ ಜನರು ಮೊದಲ 2 ಕಿಮೀ (ಕನಿಷ್ಠ ದರ) ಪ್ರಯಾಣಕ್ಕೆ 36 ರೂ.ಪಾವತಿಸಬೇಕಿದೆ.
ಬಸ್, ಮೆಟ್ರೋ ರೈಲು ಪ್ರಯಾಣ ದರ ಹೆಚ್ಚಳದ ನಂತರ ಆಟೋ ಪ್ರಯಾಣ ದರ ಹೆಚ್ಚಳಕ್ಕೆ ಆಟೋ ಚಾಲಕರು ಮತ್ತು ಸಂಘಟನೆಗಳು ಆಗ್ರಹಿಸುತ್ತಿದ್ದವು. ಈ ಹಿನ್ನೆಲೆಯಲ್ಲಿ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರು ಕಳೆದ ಜು.14 ರಂದು ಆಟೋ ಪ್ರಯಾಣ ದರ ಹೆಚ್ಚಿಸಿ ಆದೇಶಿಸಿದ್ದರು. ಈ ಆದೇಶವು ಇಂದು ಜಾರಿಗೆ ಬಂದಿದೆ.
ಆದೇಶದ ಪ್ರಕಾರ ಮೊದಲ 2 ಕಿಮೀ ಪ್ರಯಾಣದ ಮೊತ್ತವು 30 ರು.ನಿಂದ 36 ರು.ಗೆ ಹೆಚ್ಚಳವಾಗಿದ್ದು, ಉಳಿದಂತೆ ನಂತರದ ಪ್ರತಿ ಕಿಮೀ ದರವನ್ನು 15 ರೂ.ನಿಂದ 18ರೂ.ಗೆ ಹೆಚ್ಚಿಸಲಾಗಿದೆ
ಕಾಯುವಿಕೆ ದರವು ಮೊದಲ ಐದು ನಿಮಿಷ ಉಚಿತವಾಗಿದೆ. ಅನಂತರ ಪ್ರತಿ 15 ನಿಮಿಷ್ 10 ರು. ನಿಗದಿಪಡಿಸಲಾಗಿದೆ. ಪ್ರಯಾಣಿಕರ ಲಗೇಜಿಗೆ 20 ಕೆ.ಜಿ.ವರೆಗೆ ಉಚಿತವಿದೆ, ನಂತರದ 20 ಕೆ.ಜಿ. ಲಗೇಜಿಗೆ 10 ರು. ನಿಗದಿಪಡಿಸಲಾಗಿದೆ.