ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣದ ತನಿಖೆ ನಡೆಸಿದ ಎಸ್‌ಐಟಿ ತಂಡದವರಿಗೆ ಮುಖ್ಯಮಂತ್ರಿ ಪದಕ ನೀಡುತ್ತೇವೆ. ರಾಷ್ಟ್ರಪತಿ ಪದಕ ಕ್ಕೂ ಶಿಫಾರಸು ಮಾಡುತ್ತೇವೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದ್ದಾರೆ.
ಕೋರ್ಟ್ ನೀಡಿರುವುದು ಐತಿಹಾಸಿಕ ತೀರ್ಪು. ನಮ್ಮ ಎಸ್‌ಐಟಿ ತನಿಖಾ ತಂಡಕ್ಕೆ ಅಭಿನಂದನೆ ಹೇಳುತ್ತೇನೆ. ಪ್ರಕರಣದ ತನಿಖೆ ನಮ್ಮ ಪೊಲೀಸ್ ಇಲಾಖೆಗೆ ಕೀರ್ತಿ ತಂದಿದೆ. ಶೀಘ್ರ ತನಿಖೆ ಮುಗಿಸಿದ್ದಾರೆ. ಪೊಲೀಸರ ಶ್ರಮಕ್ಕೆ ಸರ್ಕಾರ ಪ್ರಶಂಸೆ ಮಾಡುತ್ತದೆ. ತನಿಖೆ ನಡೆಸಿದ ಎಸ್ ಐಟಿ ತಂಡದವರಿಗೆ ಮುಖ್ಯಮಂತ್ರಿ ಪದಕ ಕೊಡುತ್ತೇವೆ. ರಾಷ್ಟ್ರಪತಿ ಪದಕಕ್ಕೂ ಶಿಫಾರಸು ಮಾಡುವುದಾಗಿ ಗೃಹಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.