ಬೆಂಗಳೂರು: ಬೆಂಗಳೂರು ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ದಾಳಿ ಹೆಚ್ಚುತ್ತಿರುವ ಕಾರಣ ಗೊತ್ತಿದ್ದರು ಬೀದಿನಾಯಿಗಳ ನಿಯಂತ್ರಣಕ್ಕೆ ಸೂಕ್ತ ಕ್ರಮ ತೆಗೆದುಕೊಳ್ಳದೆ ನಿರ್ಲಕ್ಷ್ಯ ವಹಿಸಿದ್ದ ಬಿಬಿಎಂಪಿ ಅಧಿಕಾರಿಗಳನ್ನು ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ತರಾಟೆಗೆ ತೆಗೆದುಕೊಂಡಿದ್ದಾರೆ.
ಬೀದಿನಾಯಿಗಳ ದಾಳಿಯಿಂದ ವೃದ್ಧರೊಬ್ಬರು ಮೃತಪಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಎಸ್ಪಿ ಡಾ. ವಂಶಿಕೃಷ್ಣ ವರದಿ ನೀಡಿದ್ದರು. ಈ ಸಂಬಂಧ ಲೋಕಾಯುಕ್ತ ಕೇಂದ್ರ ಕಚೇರಿಗೆ ಸೋಮವಾರ ಬಿಬಿಎಂಪಿ ವಲಯ ಆಯುಕ್ತರು, ಜಂಟಿ ಆಯುಕ್ತರು, ಪಶುಸಂಗೋಪನೆ, ಆರೋಗ್ಯ ಇಲಾಖೆ ಸೇರಿ ಸಂಬಂಧಿತ ಅಧಿಕಾರಿಗಳನ್ನು ಕರೆಸಿ ಲೋಕಾಯುಕ್ತರು ವಿಚಾರಣೆ ನಡೆಸಿದರು.
ಅಕ್ರಮಣಕಾರಿ ನಾಯಿಗಳನ್ನು ಗುರುತಿಸಿ ಅವುಗಳ ಮೇಲೆ ನಿಗಾವಹಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು. ಬೀದಿ ನಾಯಿಗಳ ದಾಳಿ ಹೆಚ್ವುತ್ತಿರುವ ಬಗ್ಗೆ ಸಾರ್ವಜನಿಕರು ಲೋಕಾಯುಕ್ತಕ್ಕೆ ದೂರು ನೀಡಿದ್ದರು.