ಹುಬ್ಬಳ್ಳಿ: ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಆರೋಪಿ ಫಯಾಜ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ. ಆರೋಪಿ ಫಯಾಜ್ ಖುದ್ದು ಹಾಜರಾಗಲು ಕೋಟ್೯ ಆದೇಶಿಸಿದ್ದು, ಆ.6 ಕ್ಕೆ ವಿಚಾರಣೆ ಮುಂದೂಡಿದೆ.
ಹುಬ್ಬಳ್ಳಿ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧಿಶರು ಜಾಮೀನು ಅರ್ಜಿ ವಜಾ ಮಾಡಿ ಆದೇಶಿಸಿದ್ದಾರೆ. ವಾದ- ಪ್ರತಿವಾದ ಆಲಿಸಿದ ಕೋಟ್೯, ಪೊಲೀಸರು ಬಂಧನದ ಪ್ರಕ್ರಿಯೆ ಸರಿಯಾಗಿ ಮಾಡಿಲ್ಲ. ಪೋಷಕರಿಗೆ ಯಾವುದೇ ಮಾಹಿತಿ ನೀಡಿಲ್ಲ. ಈ ಆಧಾರದಲ್ಲಿ ಫಯಾಜ್‌ಗೆ ಜಾಮೀನು ನೀಡುವಂತೆ ಫಯಾಜ್ ಪರ ವಕೀಲರು ಮನವಿ ಮಾಡಿದ್ದರು. ಆದರೆ ನ್ಯಾಯಾಲಯ ಆರೋಪಿಯ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ. ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಪ್ರಕರಣದ ಆರೋಪಿಯಾಗಿರುವ ಫಯಾಜ್ ಕಳೆದ 1 ವರ್ಷ 4 ತಿಂಗಳಿಂದ ಧಾರವಾಡ ಜೈಲಿನಲ್ಲಿದ್ದಾನೆ.