ಬೆಂಗಳೂರು: ಧರ್ಮಸ್ಥಳ ಪ್ರಕರಣ ಸಂಬಂಧ
ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುವುದನ್ನು ದಯವಿಟ್ಟು ನಿಲ್ಲಿಸಿ. ಇದನ್ನು ಮುಂದುವರಿಸಿದರೆ ನಿಮ್ಮ ವಿರುದ್ಧ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕುತ್ತಿರುವವರಿಗೆ ಗೃಹ ಸಚಿವ ಜಿ. ಪರಮೇಶ್ವರ್ ಎಚ್ಚರಿಕೆ ನೀಡಿದ್ದಾರೆ.
ವಿಧಾಸನಭೆಯಲ್ಲಿ ಸೋಮವಾರ ಧರ್ಮಸ್ಥಳ ಪ್ರಕರಣ ಸಂಬಂಧ ನಡೆದ ಚರ್ಚೆ ವೇಳೆ ಉತ್ತರಿಸಿದ ಅವರು, ವಿಪಕ್ಷಗಳು ಯೂಟ್ಯೂಬರ್ಸ್ ಬಗ್ಗೆ ಪ್ರಸ್ತಾಪ ಮಾಡಿದರು. ಕೆಲವರು ಸರ್ಕಾರದ ಬಗ್ಗೆ ಆರೋಪ ಮಾಡಿ ಪೋಸ್ಟ್ ಗಳನ್ನು ಮಾಡುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕದೇ ಹೋದರೇ ಸಮಾಜದ ಸ್ವಾಸ್ಥ್ಯ ಹಾಳಾಗುತ್ತದೆ ಎಂಬ ಬಗ್ಗೆ ಅರಿವಿದೆ. ನಿಮ್ಮ ಪೋಸ್ಟ್ ನಿಂದ ಲಕ್ಷಾಂತರ ಜನರಿಗೆ ಘಾಸಿಯಾಗುತ್ತದೆ. ನಿಮ್ಮ ಪೋಸ್ಟ್ ಗಳಿಗೆ ನೀವೇ ನಿಯಂತ್ರಣ ಹಾಕಿದರೆ ಉತ್ತಮ. ಇಲ್ಲವಾದರೆ ಸರ್ಕಾರವೇ ಕಡಿವಾಣ ಹಾಕಬೇಕಾಗುತ್ತದೆ. ಸುಳ್ಳು ಸುದ್ದಿ ಹರಡುವವರ ಬಗ್ಗೆ ಮಸೂದೆಯನ್ನು ಮುಂದಿನ ಅಧಿವೇಶನದಲ್ಲಿ ಮಂಡಿಸುತ್ತೇವೆ ಎಂದು ಹೇಳಿದರು.