ಬೆಂಗಳೂರು (ವಿಧಾನಸಭೆ): ಬಾಲ್ಯ ವಿವಾಹವನ್ನು ಸಂಪೂರ್ಣವಾಗಿ ನಿಷೇಧ ಮಾಡುವ ಉದ್ದೇಆದೊಂದಿಗೆ ಮತ್ತಷ್ಟು ಕಠಿಣ ನಿಯಮಗಳನ್ನೊಳಗೊಂಡ ಬಾಲ್ಯ ವಿವಾಹ ನಿಷೇಧ ತಿದ್ದುಪಡಿ ವಿಧೇಯಕವನ್ನು ಸರ್ಕಾರ ಮಂಡಿಸಿತು. ಸದನ ಅಂಗೀಕಾರ ಮಾಡಿತು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಳರ್ ಅವರು, ಸೋಮವಾರ ವಿಧಾನಸಭೆಯಲ್ಲಿ ಬಾಲ್ಯ ವಿವಾಹ ನಿಷೇಧ (ತಿದ್ದುಪಡಿ) ವಿಧೇಯಕವನ್ನು ಮಂಡಿಸಿದರು.
ವಿಧೇಯಕವನ್ನು ಮಂಡಿಸಿದ ಬಳಿಕ ಮಾತನಾಡಿದ ಸಚಿವೆ, ಕರ್ನಾಟಕದಲ್ಲಿ ಬಾಲ್ಯ ವಿವಾಹ ಎಂಬುದು ಸಾಮಾಜಿಕ ಪೀಡುಗಾಗಿದ್ದು, ಯಾವುದೇ ಸರ್ಕಾರಗಳು ಬಂದರೂ, ಕಠಿಣ ಕಾನೂನು ತಂದರೂ ತಡೆಗಟ್ಟಲು ಇದುವರೆಗೂ ಸಾಧ್ಯವಾಗಿಲ್ಲ. ಇದಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಬಾಲ್ಯ ವಿವಾಹ ತಿದ್ದುಪಡಿ ನಿಷೇಧ ಕಾಯ್ದೆಯನ್ನು ಜಾರಿಗೆ ತರಲಾಗಿದೆ ಎಂದರು.
ಕಠಿಣ ನಿಯಮಗಳೊಂದಿಗೆ ವಿಧೇಯಕಕ್ಕೆ ತಿದ್ದುಪಡಿ ತರಲಾಗಿದೆ. ಅದರ ಪ್ರಕಾರ ಬಾಲ್ಯ ವಿವಾಹಕ್ಕೆ ನಿಶ್ಚಿತಾರ್ಥ ಮಾಡಿದರೂ ಕಾನೂನು ಕ್ರಮ ಕೈಗೊಳ್ಳಲಾಗುವುದು. ಬಾಲ್ಯ ವಿವಾಹ ಪ್ರಕರಣಗಳು ಕಂಡು ಬಂದರೆ ₹1 ಲಕ್ಷ ದಂಡ ಹಾಗೂ 2 ವರ್ಷ ಜೈಲು ಶಿಕ್ಷೆ ವಿಧಿಸಲಾಗುವುದು ಎಂದು ಹೇಳಿದರು.