ಮುಂಬೈ: ಟೆಸ್ಟ್ ಆಟಗಾರ ಚೇತೇಶ್ವರ ಪೂಜಾರ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ಇಂದು ನಿವೃತ್ತಿ ಘೋಷಿಸಿದ್ದಾರೆ.
ಚೇತೇಶ್ವರ ಪೂಜಾರ ಅವರು 2023ರಲ್ಲಿ ಆಸ್ಟ್ರೇಲಿಯಾ ವಿರುದ್ಧ ದಿ ಓವಲ್‌ನಲ್ಲಿ ನಡೆದ ವಿಶ್ವ ಟೆಸ್ಟ್ ಚಾಂಪಿಯನ್ಸ್ ಫೈನಲ್‌ನಲ್ಲಿ ಕೊನೆಯ ಬಾರಿಗೆ ಭಾರತೀಯ ತಂಡದ ಪರ ಆಟವಾಡಿದ್ದರು.
ವಿದಾಯ ಕುರಿತು ಕುರಿತು ತಮ್ಮ ಇನ್‌ಸ್ಟಾ ಖಾತೆಯಲ್ಲಿ ಭಾವುಕ ಸಂದೇಶವೊಂದನ್ನೂ ಹಂಚಿಕೊಂಡಿದ್ದಾರೆ. ಇಂಡಿಯಾ ಜೆರ್ಸಿಯನ್ನ ಧರಿಸಿ ರಾಷ್ಟ್ರಗೀತೆ ಹಾಡುವುದು, ಪ್ರತಿ ಬಾರಿ ಮೈದಾನಕ್ಕಿಳಿದಾಗ ನನ್ನ ಅತ್ಯುತ್ತಮ ಪ್ರಯತ್ನ ಮಾಡುವುದು ಇದೆಲ್ಲವೂ ಪದಗಳಲ್ಲಿ ವರ್ಣಿಸಲು ಅಸಾಧ್ಯ ಆದ್ರೆ ಎಲ್ಲ ಒಳ್ಳೇ ವಿಷಯಗಳೂ ಎಂದಾದರೂ ಕೊನೆಗೊಳ್ಳಬೇಕಲ್ಲವೇ? ಅದೇ ರೀತಿ ನಾನು ಎಲ್ಲಾ ಮಾದರಿಯ ಕ್ರಿಕೆಟ್‌ನಿಂದ ನಿವೃತ್ತಿ ಹೊಂದಲು ನಿರ್ಧರಿಸಿದ್ದೇನೆ, ಎಲ್ಲರ ಪ್ರೀತಿ ಮತ್ತು ಬೆಂಬಲಕ್ಕೆ ಧನ್ಯವಾದಗಳು ಎಂದು ಸಂದೇಶ ಹಂಚಿಕೊಂಡಿದ್ದಾರೆ.