ಬೆಂಗಳೂರು: ಆನ್‌ಲೈನ್ ಗೇಮ್ ಗಳಿಗೆ ನಿಷೇಧ ಹೇರುವುದಕ್ಕೆ ಅವಕಾಶ ಕಲ್ಪಿಸುವ ಆನ್‌ಲೈನ್ ಗೇಮಿಂಗ್ ಪ್ರಚಾರ ಮತ್ತು ನಿಯಂತ್ರಣ ಕಾಯಿದೆ-2025ನ್ನು ಜಾರಿಗೆ ತಂದಿರುವ ಕೇಂದ್ರ ಸರಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿದ್ದು, ಇಂದು ವಿಚಾರಣೆ ನಡೆಯಲಿದೆ.
ಆನ್‌ಲೈನ್ ಗೇಮಿಂಗ್ ಅನ್ನು ನಡೆಸುತ್ತಿರುವ ಹೆಡ್ ಡಿಜಿಟಲ್ ವರ್ಕ್ಸ್ ಪ್ರೈವೇಟ್ ಲಿಮಿಟೆಡ್ ಅರ್ಜಿಯನ್ನು ಸಲ್ಲಿಸಿದ್ದು, ತುರ್ತು ವಿಚಾರಣೆಗಾಗಿ ಪರಿಗಣಿಸಬೇಕು ಎಂದು ಅರ್ಜಿದಾರರ ಪರ ವಕೀಲರು ನ್ಯಾಯಮೂರ್ತಿ ಬಿ.ಎಂ. ಶ್ಯಾಮಪ್ರಸಾದ್ ಅವರ ಪೀಠದ ಮುಂದೆ ಮನವಿ ಮಾಡಿದರು. ಮನವಿಯನ್ನು ಪರಿಗಣಿಸಿದ ಪೀಠ, ಅರ್ಜಿಯ ವಿಚಾರಣೆಯನ್ನು ಆಗಸ್ಟ್ 30ರಂದು ನಡೆಸುವುದಾಗಿ ತಿಳಿಸಿತು.
ಕೇಂದ್ರ ಸರಕಾರ ಹೊಸದಾಗಿ ಜಾರಿ ಮಾಡಿರುವ ಈ ಕಾಯಿದೆ ಭಾರತದ ಗಡಿಯೊಳಗೆ ಮಾತ್ರವಲ್ಲದೇ, ಹೊರ ದೇಶಗಳಿಂದಲೂ ಭಾರತದಲ್ಲಿ ಆನ್‌ಲೈನ್ ಗೇಮಿಂಗ್‌ಗಳನ್ನು ನಿರ್ವಹಣೆ ಮಾಡುವ ಕಂಪನಿಗಳನ್ನು ನಿಯಂತ್ರಿಸುವುದಕ್ಕೂ ಅವಕಾಶ ಕಲ್ಪಿಸಲಾಗಿದೆ.