ಸುದ್ದಿ

ಸಿಎಂ ಅವಹೇಳನ ಮಾಡುವ ಸ್ಟೇಟಸ್ ಹಾಕಿಕೊಂಡಿದ್ದ ಪಿಡಿಒ ವಿರುದ್ಧ ಎಫ್ಐಆರ್

Share It

ಕಲಬುರಗಿ: ಸಿಎಂ ಸಿದ್ದರಾಮಯ್ಯ ಅವರನ್ನು ಅವಹೇಳನ ಮಾಡುವ ರೀತಿಯಲ್ಲಿ ಮೊಬೈಲ್ ಸ್ಟೇಟಸ್ ಇಟ್ಟುಕೊಂಡಿದ್ದ ಜಿಲ್ಲೆಯ ಆಳಂದ ತಾಲ್ಲೂಕಿನ ಸುಂಟನೂರ ಗ್ರಾಮ ಪಂಚಾಯಿತಿ ಪಿಡಿಒ ಪ್ರವೀಣಕುಮಾರ್ ವಿರುದ್ಧ ಎಫ್‌ಐಆ‌ರ್ ದಾಖಲಾಗಿದೆ.

ಆಗಸ್ಟ್ 21ರಂದು ಆರೋಪಿ ಪ್ರವೀಣಕುಮಾರ್ ತಮ್ಮ ಮೊಬೈಲ್ ನಲ್ಲಿ ಸಿದ್ರಾಮುಲ್ಲಾಖಾನ್ ಎಂಬ ಬರಹದ ಜೊತೆಗೆ ಸಿದ್ದರಾಮಯ್ಯ ಅವರ ತಲೆಗೆ ಮುಸ್ಲಿಮರು ಧರಿಸುವ ಟೋಪಿ ಹಾಕಿರುವಂತೆ ಎಡಿಟ್ ಮಾಡಲಾದ ಚಿತ್ರವನ್ನು ಮೊಬೈಲ್ ಸ್ಟೇಟಸ್‌ ಇಟ್ಟುಕೊಂಡಿದ್ದರು.
ಇದನ್ನು ಗಮನಿಸಿದ ಸುಂಟನೂರ ಗ್ರಾಮದ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಡಣ್ಣೂರ ಪೊಲೀಸರಿಗೆ ದೂರು ನೀಡಿದ್ದರು.ಅಲ್ಲದೆ,ಆಳಂದ ತಾಲ್ಲೂಕು ಕುರುಬರ ಸಂಘದ ಯುವ ಘಟಕದ ಅಧ್ಯಕ್ಷ ಬೀರಣ್ಣಾ ಪೂಜಾರಿ ಅವರು ಪಿಡಿಒ ವಿರುದ್ಧ ಶಿಸ್ತು ಕ್ರಮಕ್ಕೆ ಆಗ್ರಹಿಸಿ ಪಂಚಾಯಿತಿ ಅಧಿಕಾರಿಗಳಿಗೆ ದೂರು ನೀಡಿದ್ದರು.

ದೂರು ಆಧರಿಸಿ ನಿಂಬರ್ಗಾ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪಿಡಿಒ ಪ್ರವೀಣಕುಮಾರ್ ವಿರುದ್ಧ ಎಫ್‌ಐಆರ್ ದಾಖಲಾದ ಮಾಹಿತಿ ಹಾಗೂ ಗ್ರಾಮಸ್ಥರು ದೂರು ನೀಡಿರುವ ಕುರಿತು ಜಿಲ್ಲಾ ಪಂಚಾಯಿತಿ ಸಿಇಒ ಭಂವರ್ ಸಿಂಗ್ ಮೀನಾ ಅವರ ಗಮನಕ್ಕೆ ತರಲಾಗಿದ್ದು, ಅಧಿಕಾರಿಗಳು ಪಿಡಿಒ ವಿರುದ್ಧ ಮುಂದಿನ ಕ್ರಮಕ್ಕೆ ಮುಂದಾಗಿದ್ದಾರೆ.


Share It

You cannot copy content of this page