ಸುದ್ದಿ

ಹಿರಿಯ ನಟ ವಿಷ್ಣುವರ್ಧನ್ ಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ

Share It

ಬೆಂಗಳೂರು: ಚಂದನವನದ ಹಿರಿಯ ನಟ ವಿಷ್ಣುವರ್ಧನ್ ಹಾಗೂ ನಟಿ ಬಿ.ಸರೋಜಾದೇವಿ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

ನಟ ವಿಷ್ಣುವರ್ಧನ್‌ಗೆ ಮರಣೋತ್ತರ ಕರ್ನಾಟಕ ರತ್ನ ನೀಡುವಂತೆ ಭಾರತಿ ವಿಷ್ಣುವರ್ಧನ್, ನಟ ಅನಿರುದ್ಧ್ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಕರ್ನಾಟಕ ರತ್ನ ನೀಡುವಂತೆ ಮನವಿ ಮಾಡಿಕೊಂಡಿದ್ದರು. ಜೊತೆಗೆ ವಿಷ್ಣು ಅಭಿಮಾನಿಗಳು ಈ ಸಂಬಂಧ ಸರ್ಕಾರಕ್ಕೆ ಒತ್ತಾಯಿಸುತ್ತಿದ್ದರು.

ಇದೀಗ ರಾಜ್ಯ ಸರ್ಕಾರ ನಟ ವಿಷ್ಣುವರ್ಧನ್‌ಗೆ ಮರಣೋತ್ತರ ಕರ್ನಾಟಕ ರತ್ನ ನೀಡಲು ತೀರ್ಮಾನಿಸಿದೆ. ಇದರ ಜೊತೆಗೆ ನಟಿ ಬಿ.ಸರೋಜಾದೇವಿ ಅವರಿಗೂ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಲು ತೀರ್ಮಾನಿಸಲಾಗಿದೆ. ಪ್ರಶಸ್ತಿ ಸಮಾರಂಭ ನಡೆಯುವ ದಿನಾಂಕವನ್ನು ತೀರ್ಮಾನಿಸಲಾಗುವುದು ಎಂದು ಕಾನೂನು ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದರು.


Share It

You cannot copy content of this page