ಬೆಂಗಳೂರು: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಾದ ರಾಷ್ಟ್ರಕವಿ ಕುವೆಂಪು ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಈ ವಿಷಯ ಕುರಿತು ಮಾತನಾಡಿದ ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಅವರು ಜ್ಞಾನಪೀಠ ಪ್ರಶಸ್ತಿ ವಿಜೇತ ರಾಷ್ಟ್ರಕವಿ ಕುವೆಂಪುಗೆ ಭಾರತ ರತ್ನ ನೀಡುವಂತೆ ಹಲವು ವರ್ಷಗಳಿಂದ ಬೇಡಿಕೆ ಇತ್ತು. ಇದೀಗ ರಾಜ್ಯ ಸರ್ಕಾರ ಕುವೆಂಪುಗೆ ಭಾರತರತ್ನ ಪ್ರಶಸ್ತಿ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ ಎಂದು ಹೇಳಿದರು.