ಬೆಂಗಳೂರು: ಅಪ್ರಾಪ್ತ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ತಂದೆಗೆ 5 ವರ್ಷ ಜೈಲು ಶಿಕ್ಷೆ ವಿಧಿಸಿ ಬೆಂಗಳೂರಿನ 1ನೇ ತ್ವರಿತಗತಿ ನ್ಯಾಯಾಲಯ ತೀರ್ಪು ನೀಡಿದೆ. 48 ವರ್ಷದ ವ್ಯಕ್ತಿ ಶಿಕ್ಷೆಗೊಳಗಾದ ಅಪರಾಧಿ.
48 ವರ್ಷದ ವ್ಯಕ್ತಿ ಶಿಕ್ಷೆಗೊಳಗಾದ ಅಪರಾಧಿ. ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಸುಜಾತ.ಎಸ್ ಅವರು ಅಪರಾಧಿಗೆ 5 ವರ್ಷ ಸಾದಾ ಜೈಲು ಶಿಕ್ಷೆ ಪ್ರಕಟಿಸಿದ್ದಾರೆ ಸಂತ್ರಸ್ತೆಗೆ 1 ಲಕ್ಷ ರೂ ಪರಿಹಾರ ನೀಡುವಂತೆಯೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ನಿರ್ದೇಶಿಸಿದೆ.
ಬೊಮ್ಮನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹೆಂಡತಿ, ಅಪ್ರಾಪ್ತ ಮಗಳ ಜೊತೆ ಅಪರಾಧಿ ವಾಸವಾಗಿದ್ದ. ಕುಡಿತಕ್ಕೆ ದಾಸನಾಗಿದ್ದ ಈತ ಕೆಲಸಕ್ಕೆ ಹೋಗುತ್ತಿರಲಿಲ್ಲ. ಪತ್ನಿ ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡುತ್ತಿದ್ದರು. ಪತ್ನಿ ಕೆಲಸಕ್ಕೆ ಹೋದಾಗ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ. ಈ ಬಗ್ಗೆ ಪ್ರಶ್ನಿಸಿದ್ದಕ್ಕೆ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದ ಎಂದು ದೂರು ದಾಖಲಾಗಿತ್ತು.
ಪತ್ನಿ ಕೆಲಸಕ್ಕೆ ಹೋಗಿದ್ದಾಗ ಬೇಗ ಏಳಲಿಲ್ಲ ಎಂಬ ನೆಪವೊಡ್ಡಿ ಮಗಳ ಎಡಗೈ ತೋಳಿನ ಮೇಲೆ ಬೀಡಿಯಿಂದ ಸುಟ್ಟು ಗಾಯಗೊಳಿಸಿದ್ದ. ತಾಯಿ ಬೊಮ್ಮನಹಳ್ಳಿ ಪೊಲೀಸರಿಗೆ 2023ರ ಮೇ 23ರಂದು ದೂರು ನೀಡಿದ್ದರು. ಪೋಕ್ಸೋ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಆರೋಪಿಯನ್ನು ಬಂಧಿಸಿ ಕೋರ್ಟ್‌ಗೆ ಚಾರ್ಜ್ ಶೀಟ್ ಸಲ್ಲಿಸಿದ್ದರು