ಬೆಂಗಳೂರು: ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ 35ನೇ ಆರೋಪಿಯಾಗಿರುವ ರಾಜ್ಯ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ (ಎಡಿಜಿಪಿ) ಅಮೃತ್‌ಪೌಲ್ ವಿರುದ್ಧದ ವಿಚಾರಣೆ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ.
ಪ್ರಕರಣ ಸಂಬಂಧ ತಮ್ಮ ವಿರುದ್ಧ ಸಿಐಡಿ ಪೊಲೀಸರು ಸಲ್ಲಿಸಿರುವ ಏಳು ದೋಷಾರೋಪ ಪಟ್ಟಿಗಳನ್ನು ರದ್ದುಪಡಿಸಬೇಕು. ಪ್ರಕರಣ ಕುರಿತು ನಗರದ 23ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ನಡೆಸುತ್ತಿರುವ ವಿಚಾರಣೆ ಅನೂರ್ಜಿತಗೊಳಿಸಬೇಕು ಎಂದು ಕೋರಿ ಎಡಿಜಿಪಿ ಅಮೃತ್ ಪೌಲ್ ಹೈಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಸಿದ್ದರು.