ಸುದ್ದಿ

ಜಾಮೀನು ಅರ್ಜಿಗಳನ್ನು ಸಲ್ಲಿಸಿದ ದಿನದಿಂದ 2 ತಿಂಗಳೊಳಗೆ ಇತ್ಯರ್ಥಪಡಿಸುವಂತೆ ನ್ಯಾಯಾಲಯಗಳಿಗೆ ಸುಪ್ರೀಂಕೋರ್ಟ್ ಸೂಚನೆ

Share It

ನವದೆಹಲಿ: ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ಸಲ್ಲಿಸಿದ ದಿನದಿಂದ ಎರಡು ತಿಂಗಳೊಳಗೆ ತ್ವರಿತವಾಗಿ ಅವುಗಳನ್ನು ಇತ್ಯರ್ಥಪಡಿಸುವಂತೆ ಸುಪ್ರೀಂಕೋರ್ಟ್  ಹೈಕೋರ್ಟ್ ಗಳು ಮತ್ತು ವಿಚಾರಣಾ ನ್ಯಾಯಾಲಯಗಳಿಗೆ ನಿರ್ದೇಶನ ನೀಡಿದೆ.

ಆರೋಪಿಗಳು ಅನಿಶ್ಚಿತತೆಯಲ್ಲಿ ಸಿಲುಕಿರುವಾಗ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಅರ್ಜಿಗಳನ್ನು ವರ್ಷಾನುಗಟ್ಟಲೆ ಬಾಕಿ ಇಡಲಾಗದು ಎಂದು ನ್ಯಾಯಮೂರ್ತಿಗಳಾದ ಜೆ ಬಿ ಪಾರ್ದಿವಾಲಾ ಮತ್ತು ಆ‌ರ್ ಮಹಾದೇವನ್ ಅವರಿದ್ದ ಪೀಠ ಅಭಿಪ್ರಾಯಪಟ್ಟಿದೆ.

ಜಾಮೀನು ಮತ್ತು ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ಅರ್ಹತೆ ಆಧಾರದ ಮೇಲೆ ತ್ವರಿತವಾಗಿ ನಿರ್ಧರಿಸಬೇಕು. ಕಕ್ಷಿದಾರರನ್ನು ಅನಿರ್ದಿಷ್ಟಾವಧಿ ಬಾಕಿ ಉಳಿಯುವ ಸ್ಥಿತಿಗೆ ದೂಡಬಾರದು ಎಂಬುದು ನ್ಯಾಯಾಲಯದ ಅನೇಕ ತೀರ್ಪುಗಳಿಂದ ಸ್ಪಷ್ಟವಾಗಿದೆ. ಅರ್ಜಿ ವಿಲೇವಾರಿಗೊಳಿಸದೆ ದೀರ್ಘಕಾಲ ವಿಳಂಬಗೊಳಿಸುವುದು ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ ಉದ್ದೇಶವನ್ನು ನಿರಾಶೆಗೊಳಿಸುವುದಲ್ಲದೆ, ನ್ಯಾಯದ ನಿರಾಕರಣೆಗೆ ಸಮನಾಗಿದ್ದು ಸಂವಿಧಾನದ 14 ಮತ್ತು 21ನೇ ವಿಧಿಯಲ್ಲಿ ಹೇಳಲಾದ ನೀತಿಗೆ ವಿರುದ್ಧ ಎಂದು ನ್ಯಾಯಾಲಹೈಕೋರ್ಟಿನ

ತನ್ನ ನಿರ್ದೇಶನಗಳನ್ನು ಕೂಡಲೇ ಪಾಲಿಸಿ ಆಡಳಿತಾತ್ಮಕ ಕ್ರಮ ಕೈಗೊಳ್ಳುವುದಕ್ಕಾಗಿ ಎಲ್ಲಾ ಹೈಕೋರ್ಟ್ ಗಳಿಗೆ ತೀರ್ಪಿನ ಪ್ರತಿ ಕಳಿಸುವಂತೆ ಸುಪ್ರೀಂಕೋರ್ಟ್ ನ್ಯಾಯಾಂಗ ವಿಭಾಗದ ರಿಜಿಸ್ಟ್ರಾ‌ರ್ ಅವರಿಗೆ ಪೀಠ ಆದೇಶಿತು.

ಸುಮಾರು ಆರು ವರ್ಷಗಳ ಕಾಲ 2019ರಿಂದ ಬಾಂಬೆ ಹೈಕೋರ್ಟಿನಲ್ಲಿ ಇಬ್ಬರು ನಿವೃತ್ತ ಕಂದಾಯ ಅಧಿಕಾರಿಗಳ ನಿರೀಕ್ಷಣಾ ಜಾಮೀನು ಅರ್ಜಿಗಳು ಬಾಕಿ ಉಳಿದಿದ್ದವು. ಜುಲೈ 2025 ರಲ್ಲಿ ಅವರ ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ಅವರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.

ಜಾಮೀನು ಮತ್ತು ನಿರೀಕ್ಷಣಾ ಜಾಮೀನು ಅರ್ಜಿಗಳ ತ್ವರಿತ ವಿಚಾರಣೆಗೆ ನ್ಯಾಯಾಲಯ ಸೂಚಿಸಿತಾದರೂ ಪ್ರಸ್ತುತ ಪ್ರಕರಣದ ಆರೋಪಗಳ ಗಂಭೀರತೆಯನ್ನು ಪರಿಗಣಿಸಿ ಅರ್ಜಿದಾರರಿಗೆ ಪರಿಹಾರ ನಿರಾಕರಿಸಿದ ಬಾಂಬೆ ಹೈಕೋರ್ಟಿನ ತೀರ್ಪನ್ನು ಎತ್ತಿಹಿಡಿಯಿತು.


Share It

You cannot copy content of this page