ಸುದ್ದಿ

ಲಂಚ: ಲೋಕಾಯುಕ್ತ ಬಲೆಗೆ ಬಿಇಒ ಕಚೇರಿ ಎಫ್‌ಡಿಎ

Share It

ಶಿರಹಟ್ಟಿ: ಇಲ್ಲಿನ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಪ್ರಥಮ ದರ್ಜೆ ಸಹಾಯಕ (ಎಫ್‌ಡಿಎ) ಶುಕ್ರವಾರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಎಸ್.ಎಸ್. ಚೌತಾಯಿ ಲೋಕಾಯುಕ್ತ ಬಲೆಗೆ ಬಿದ್ದ ಎಫ್‌ಡಿಎ

ಲಕ್ಷ್ಮೇಶ್ವರದ ಮುಖ್ಯೋಪಾಧ್ಯಾಯ ಎಸ್.ಬಿ.ಲಕ್ಷ್ಮೇಶ್ವರ ಅವರ ಸೇವಾ ಪುಸ್ತಕವನ್ನು ಬೆಂಗಳೂರಿನ ಮಹಾಲೇಖಪಾಲಕರ ಕಚೇರಿಗೆ ಕಳುಹಿಸಿಕೊಡುವ ಸಂಬಂಧ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ದೂರು ಬಂದಿತ್ತು. 4 ಸಾವಿರ ರೂ. ಪಡೆದುಕೊಳ್ಳುವ ಸಮಯದಲ್ಲಿ ಸಿಕ್ಕಿ ಬಿದ್ದಿರುವ ಎಫ್‌ಡಿಎ ಎಸ್.ಎಸ್. ಚೌತಾಯಿ ಅವರ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಲೋಕಾಯುಕ್ತ ಪೊಲೀಸರು ದೂರು ದಾಖಲಿಸಿದ್ದು ತನಿಖೆ ಕೈಗೊಂಡಿದ್ದಾರೆ.


Share It

You cannot copy content of this page