ಬೆಂಗಳೂರು: ನಗರದ ತಾಜ್‌ವೆಸ್ಟ್ ಎಂಡ್ ಹೋಟೆಲ್‌ನಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಶಂಕಿತ ವ್ಯಕ್ತಿಯನ್ನು ಪೊಲೀಸ್ ಠಾಣೆಗೆ ಕರೆತಂದು ವಿಚಾರಣೆ ನಡೆಸಿ ಪ್ರಕರಣ ದಾಖಲಿಸದೇ ರಾತ್ರೋರಾತ್ರಿ ಬಿಟ್ಟು ಕಳುಹಿಸಿ ಕರ್ತವ್ಯ ಲೋಪ ಎಸಗಿದ ಆರೋಪದಡಿ ಹೈಗೌಂಡ್ಸ್ ಪೊಲೀಸ್ ಠಾಣೆಯ ಪಿಎಸ್‌ಐ ಉಮಾ ಶಂಕರ್‌ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.
ಇತ್ತೀಚೆಗೆ ತಾಜ್ ವೆಸ್ಟ್ ಎಂಡ್ ಹೋಟೆಲ್‌ನಲ್ಲಿ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ. ಈ ಸಂಬಂಧ ಹೋಟೆಲ್‌ನಲ್ಲಿದ್ದ ಫ್ರೆಂಚ್ ಎಂಬೆಸ್ಸಿ ಅಧಿಕಾರಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದರು. ಬಳಿಕ ಹೈಗೌಂಡ್ಸ್ ಠಾಣೆ ಪೊಲೀಸರು ಆ ಶಂಕಿತ ವ್ಯಕ್ತಿಯನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದಿದ್ದರು. ಬಳಿಕ ಆತನ ವಿಚಾರಣೆ ನಡೆಸಿ ಪ್ರಕರಣ ದಾಖಲಿಸದೇ ರಾತ್ರೋರಾತ್ರಿ ಬಿಟ್ಟು ಕಳುಹಿಸಿದ್ದರು. ಫ್ರೆಂಚ್ ಎಂಬೆಸ್ಸಿ ಅಧಿಕಾರಿಗಳು ಆ ವ್ಯಕ್ತಿಯ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳ ಗಮನಕ್ಕೂ ತಂದಿದ್ದರು.
ಈ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳು ವಿಚಾರಿಸಿದಾಗ ಆ ಅಪರಿಚಿತ ವ್ಯಕ್ತಿಯನ್ನು ಬಿಟ್ಟು ಕಳು ಹಿಸಿರುವುದು ಬೆಳಕಿಗೆ ಬಂದಿದೆ. ಹೀಗಾಗಿ ಕರ್ತವ್ಯ ಲೋಪ ಎಸಗಿರುವ ಆರೋಪದಡಿ ಪಿಎಸ್‌ಐ ಉಮಾಶಂಕರ್ ಅವರನ್ನು ಜಂಟಿ ಪೊಲೀಸ್ ಆಯುಕ್ತರು ಅಮಾನತುಗೊಳಿಸಿ ಆದೇಶ ಮಾಡಿದ್ದಾರೆ