ಸುದ್ದಿ

ಸುಳ್ಳು ಕೇಸ್ ದಾಖಲಿಸುವ ಪೊಲೀಸರ ವಿರುದ್ಧ ಕಾನೂನು ಕ್ರಮ ಜರುಗಿಸಲು ಪೂರ್ವಾನುಮತಿ ಅಗತ್ಯವಿಲ್ಲ: ಸುಪ್ರೀಂ

Share It

ನವದೆಹಲಿ: ಸುಳ್ಳು ಪ್ರಕರಣಗಳನ್ನು ದಾಖಲಿಸಿದ ಅಥವಾ ಸಾಕ್ಷ್ಯಗಳನ್ನು ಸೃಷ್ಟಿಸಿದ ಆರೋಪ ಹೊತ್ತಿರುವ ಪೊಲೀಸ್ ಅಧಿಕಾರಿಗಳನ್ನು ವಿಚಾರಣೆಗೆ ಒಳಪಡಿಸಲು ಪೂರ್ವಾನುಮತಿ ಅಗತ್ಯವಿಲ್ಲ ಎಂದು ಸುಪ್ರೀಂ ಕೋರ್ಟ್  ಹೇಳಿದೆ.

ಕ್ರಿಮಿನಲ್‌ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 197 ರ ಅಡಿಯಲ್ಲಿ ಅನುಮತಿಯಿಲ್ಲದೆ ಅಂತಹ ಅಧಿಕಾರಿಗಳನ್ನು ವಿಚಾರಣೆಗೆ ಒಳಪಡಿಸಲಾಗುವುದಿಲ್ಲ ಎಂದು ಹೇಳಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ.

ನ್ಯಾಯಮೂರ್ತಿ ಜೆ.ಬಿ.ಪರ್ಡಿವಾಲಾ ಮತ್ತು ನ್ಯಾಯಮೂರ್ತಿ ಮನೋಜ್ ಮಿಶ್ರಾ ಅವರ ನ್ಯಾಯಪೀಠವು ಸಾರ್ವಜನಿಕ ಸೇವಕರಿಂದ ಯಾವುದೇ ಅಧಿಕಾರದ ದುರುಪಯೋಗವು ರಕ್ಷಣಾತ್ಮಕ ಛತ್ರಿಯಡಿ ಬರುವುದಿಲ್ಲ ಎಂದು ಪ್ರತಿಪಾದಿಸಿತು.

ಅಧಿಕಾರಿಯೊಬ್ಬರು ಸುಳ್ಳು ಪ್ರಕರಣ ದಾಖಲಿಸಿದ್ದಾರೆ ಎಂದು ಹೇಳಿದಾಗ, ಸೆಕ್ಷನ್ 197 CRPC ಅಡಿಯಲ್ಲಿ ಕಾನೂನು ಕ್ರಮಕ್ಕೆ ಅನುಮತಿ ಅಗತ್ಯವಿದೆ ಎಂದು ಅವರು ಹೇಳಲು ಸಾಧ್ಯವಿಲ್ಲ, ಏಕೆಂದರೆ ನಕಲಿ ಪ್ರಕರಣವನ್ನು ದಾಖಲಿಸುವುದು ಮತ್ತು ಅದಕ್ಕೆ ಸಂಬಂಧಿಸಿದಂತೆ ಸಾಕ್ಷ್ಯಗಳು ಅಥವಾ ದಾಖಲೆಗಳನ್ನು ಸೃಷ್ಟಿಸುವುದು ಸಾರ್ವಜನಿಕ ಅಧಿಕಾರಿಯ ಅಧಿಕೃತ ಕರ್ತವ್ಯದ ಭಾಗವಲ್ಲ” ಎಂದು ಸ್ಪಷ್ಟವಾಗಿ ಹೇಳಿದೆ.


Share It

You cannot copy content of this page