ಕೊಪ್ಪಳ: ವಸತಿ ನಿಲಯದಲ್ಲಿ ಹತ್ತನೇ ತರಗತಿ ವಿದ್ಯಾರ್ಥಿನಿ ಗಂಡು ಮಗುವಿಗೆ ಜನ್ಮ ನೀಡಿದ ಪ್ರಕರಣದ ಹಿನ್ನೆಲೆಯಲ್ಲಿ ಪೊಕ್ಸೋ ಕಾಯ್ದೆಯಡಿ 6 ಜನರ ವಿರುದ್ಧ ದೂರು ದಾಖಲು ಮಾಡಲಾಗಿದೆ.
ಕುಕನೂರು ತಾಲೂಕಿನ ಗ್ರಾಮವೊಂದರ ವಸತಿ ಶಾಲೆಯಲ್ಲಿ ಬಾಲಕಿ ಮಗುವಿಗೆ ಜನ್ಮ ನೀಡಿದ್ದಳು. ಕುಕನೂರು ಪೊಲೀಸ್ ಠಾಣೆಯಲ್ಲಿ ಆರು ಜನರ ವಿರುದ್ದ ದೂರು ದಾಖಲಾಗಿದೆ. ಹನುಮಗೌಡ ಎಂಬಾತನನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ವಸತಿ ನಿಲಯದ ಮೇಲ್ವಿಚಾರಕಿ ಶಶಿಕಲಾ ಹಿರೇಮಠ, ಹಿರಿಯ ಶಿಕ್ಷಕ ಪ್ರಭಾಕರ, ಶಿಕ್ಷಕ ಯಂಕಪ್ಪ, ವೈದ್ಯ ಭರತೇಶ್, ಸಬೀಯಾ ವಿರುದ್ದ ದೂರು ದಾಖಲಿಸಲಾಗಿದೆ ಎಂದು ಎಂದು ಎಸ್ಪಿ ಡಾ। ರಾಮ್ ಎಲ್ ಅರಸಿದ್ದಿ ತಿಳಿಸಿದ್ದಾರೆ.
ತಾಲೂಕಿನ ಗ್ರಾಮದಲ್ಲಿ ವಸತಿ ನಿಲಯ ಹಾಗೂ ಶಾಲೆ ಎರಡೂ ಅಕ್ಕಪಕ್ಕ ಇವೆ. ಪೊಕ್ಸೋ ಕಾಯ್ದೆ ಕುರಿತು ನಾವು ಜಾಗೃತಿ ಮೂಡಿಸುತ್ತಿದ್ದೇವೆ. ಘಟನೆಗೆ ನಿರ್ಲಕ್ಷ್ಯ ಮಾಡಿದವರ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.