ಮಡಿಕೇರಿ: ಒಂದೇ ಕುಟುಂಬದ ನಾಲ್ಕು ಜನರನ್ನು ಹತ್ಯೆ ಮಾಡಿದ್ದ ಕೊಲೆ ಅಪರಾಧಿಗೆ ಕೊಡಗು ಜಿಲ್ಲೆಯ ವಿರಾಜಪೇಟೆ ಸೆಷನ್ಸ್ ನ್ಯಾಯಾಲಯವು ಗಲ್ಲು ಶಿಕ್ಷೆ ವಿಧಿಸಿ ಐತಿಹಾಸಿಕ ತೀರ್ಪು ಪ್ರಕಟಿಸಿದೆ. ಕೇರಳ ಮೂಲದ ಗಿರೀಶ್ (37) ಗಲ್ಲು ಶಿಕ್ಷೆಗೆ ಒಳಗಾದ ಅಪರಾಧಿ.
ಪತ್ನಿಯ ಮೇಲೆ ಸಂಶಯಗೊಂಡು 2024ರಲ್ಲಿ ಪೊನ್ನಂಪೇಟೆ ತಾಲೂಕಿನ ಬೇಗೂರು ಗ್ರಾಮದ ಕೊಳತೋಡು ಎಂಬಲ್ಲಿ ಒಂದೇ ಕುಟುಂಬದ ನಾಲ್ವರನ್ನು ಪತ್ನಿ ನಾಗಿ (35), ಆಕೆಯ ಮಗಳು ಕಾವೇರಿ (7), ಹಾಗೂ ನಾಗಿಯ ಅಜ್ಜ-ಅಜ್ಜಿ ಕರಿಯ (75) ಮತ್ತು ಗೌರಿ (70) ಅವರನ್ನು ಅಪರಾಧಿ ಗಿರೀಶ್ ಕತ್ತಿಯಿಂದ ಕೊಚ್ಚಿ ಕೊಲೆಗೈದು ಪರಾರಿಯಾಗಿದ್ದ.
ಈ ಪ್ರಕರಣ ಸಂಬಂಧ ದೂರು ದಾಖಲಿಸಿಕೊಂಡಿದ್ದ ಪೊನ್ನಂಪೇಟೆ ಪೊಲೀಸರು ಗಿರೀಶ್‌ನನ್ನು ಬಂಧಿಸಿದ್ದರು. ಪೊಲೀಸರು ತನಿಖೆ ನಡೆಸಿ ಕೋರ್ಟ್‌ಗೆ ಚಾರ್ಜ್‌ಶೀಟ್ ಸಲ್ಲಿಸಿದ್ದರು.