ಬೆಂಗಳೂರು: ರೌಡಿ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ, ಕೆ.ಆರ್.ಪುರ ಕ್ಷೇತ್ರದ ಬಿಜೆಪಿ ಶಾಸಕ ಬೈರತಿ ಬಸವರಾಜು ಅವರಿಗೆ ಮಧ್ಯಂತರ ಜಾಮೀನು ನೀಡಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶನಿವಾರ ನಿರಾಕರಿಸಿದ್ದು ಅವರಿಗೆ ಬಂಧನದ ಭೀತಿ ಮತ್ತಷ್ಟು ಹೆಚ್ಚಾಗಿದೆ.
ಈ ನಡುವೆ ನಿರೀಕ್ಷಣಾ ಜಾಮೀನು ಅರ್ಜಿ ವಜಾ ಬೆನ್ನಲ್ಲೇ ಶಾಸಕ ಬಸವರಾಜು ನಾಪತ್ತೆ ಯಾಗಿದ್ದಾರೆ. ಶಾಸಕರ ಪತ್ತೆಗೆ ಶುಕ್ರವಾರ ಸಂಜೆಯಿಂದ ಕಾರ್ಯಾಚರಣೆಗಿಳಿದಿರುವ ರಾಜ್ಯ ಅಪರಾಧ ತನಿಖಾ ಇಲಾಖೆ (ಸಿಐಡಿ)ಯ ಅಧಿಕಾರಿಗಳು, ಬೆಂಗಳೂರು, ತಮಿಳುನಾಡು, ಮಹಾರಾಷ್ಟ್ರಗಳಲ್ಲಿ ಶೋಧ ನಡೆಸಿದ್ದಾರೆ.
ಮಧ್ಯಂತರ ಬೇಲ್ ಕೋರಿದ್ದ ಬೈರತಿ ಬಸವರಾಜ್ ಅರ್ಜಿ ನ್ಯಾಯಾಲಯದಲ್ಲಿ ತಿರಸ್ಕೃತಗೊಂಡಿದ್ದು
ಸೋಮವಾರವೂ ಬೇಲ್ ಸಿಗದಿದ್ದರೆ ಮತ್ತಷ್ಟು ಸಂಕಷ್ಟ ಎದುರಾಗಲಿದೆ.