ಸುದ್ದಿ

ಮಕ್ಕಳಿಗೂ ಹೆಲ್ಮೆಟ್ ಕಡ್ಡಾಯ ಮಾಡುವಂತೆ ಸರ್ಕಾರಕ್ಕೆ ಹೈಕೋರ್ಟ್‌ ಸೂಚನೆ

Share It

ಬೆಂಗಳೂರು: ದ್ವಿಚಕ್ರ ವಾಹನಗಳಲ್ಲಿ ಮಕ್ಕಳನ್ನು ಕರೆದೊಯ್ಯುವಾಗ ಸುರಕ್ಷತೆ ಕಾಪಾಡುವ ನಿಟ್ಟಿನಲ್ಲಿ ಮಕ್ಕಳಿಗೂ ಹೆಲ್ಮೆಟ್ ಕಡ್ಡಾಯ ಮಾಡಲು ಕಟ್ಟುನಿಟ್ಟಿನ ಕ್ರಮಕೈಗೊಳ್ಳುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ.

ಈ ಸಂಬಂಧ 6 ತಿಂಗಳೊಳಗೆ ಜಾರಿಗೆ ತನ್ನಿ ಎಂದು ಹೇಳಿರುವ ಹೈಕೋರ್ಟ್ 2022ರ ಕೇಂದ್ರೀಯ ಮೋಟಾರು ವಾಹನ ನಿಯಮಗಳನ್ನು ತಕ್ಷಣವೇ ಜಾರಿಗೆ ತರುವಂತೆ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶಿಸಿದೆ.

9 ತಿಂಗಳಿಂದ 4 ವರ್ಷದೊಳಗಿನ ಮಕ್ಕಳನ್ನು ಕರೆದೊಯ್ಯುವಾಗ ವಾಹನದ ವೇಗವನ್ನು 40 ಕಿ.ಮೀ. ಗೆ ಸೀಮಿತಗೊಳಿಸಬೇಕು. ಮಕ್ಕಳಿಗೆ ಸೇಫ್ಟಿ ಜಾಕೆಟ್ ಹಾಗೂ ಹೆಳ್ಮೆಟ್ ಕಡ್ಡಾಯವಾಗಿ ತೊಡಿಸಬೇಕು ಎಂಬ ನಿಯಮಗಳ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಬೇಕು ಎಂದು ನ್ಯಾಯಾಲಯ ಹೇಳಿದೆ.

ಮಕ್ಕಳಿಗೆ ರಸ್ತೆ ಸುರಕ್ಷತಾ ಕ್ರಮಗಳನ್ನು ಜಾರಿಗೊಳಿಸಲು ನಿರ್ದೇಶಿಸುವಂತೆ ಕೋರಿ ಡಾ.ಅರ್ಚನಾ ಭಟ್ ಎಂಬುವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಬ್ರು ಮತ್ತು ನ್ಯಾಯಮೂರ್ತಿ ಸಿ.ಎಂ. ಪೂಣಚ್ಚ ಅವರ ವಿಭಾಗೀಯ ಪೀಠ ಸರ್ಕಾರಕ್ಕೆ ಈ ನಿರ್ದೇಶನ ನೀಡಿದೆ.

ನಿಯಮಗಳನ್ನು ಜಾರಿ ಮಾಡಲು ಮಕ್ಕಳ ಸುರಕ್ಷತಾ ಜಾಕೆಟ್ ಮತ್ತು ಹೆಲೈಟ್‌ಗಳ ಕೊರತೆಯಿದೆ. ಇದರ ಉತ್ಪಾದನೆಗೆ ಐದರಿಂದ ಆರು ತಿಂಗಳ ಕಾಲಾವಕಾಶ ಬೇಕು ಎಂದು ಉತ್ಪಾದಕರು ತಿಳಿಸಿದ್ದಾರೆ ಎಂದು ಸರ್ಕಾರ ತಿಳಿಸಿತ್ತು. ಇದನ್ನು ಪರಿಗಣಿಸಿರುವ ಹೈಕೋರ್ಟ್, ಆದಷ್ಟು ಬೇಗ ಆದ್ಯತೆ ಮೇರೆಗೆ 6 ತಿಂಗಳೊಳಗೆ ಕ್ರಮ ತೆಗೆದುಕೊಳ್ಳುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಿದೆ.


Share It

You cannot copy content of this page