ಸುದ್ದಿ

ಪತ್ನಿ ಸುಪರ್ದಿಗೆ ಮಕ್ಕಳನ್ನು ನೀಡಲು ಕೋರ್ಟ್ ಆದೇಶ: ಮಕ್ಕಳಿಗೂ ವಿಷವುಣಿಸಿ ಆತ್ಮಹತ್ಯೆ ಮಾಡಿಕೊಂಡ ಪತಿ

Share It

ಪತ್ನಿ ಜೊತೆ ಮಕ್ಕಳನ್ನು ಬಿಡಲು ಕೋರ್ಟ್ ಆದೇಶಿಸಿದ್ದಕ್ಕೆ ಮನನೊಂದ ಪತಿ ಎರಡು ಮಕ್ಕಳಿಗೆ ವಿಷವುಣಿಸಿ ತಾಯಿ ಜೊತೆ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆಯೊಂದು ಕೇರಳ ಕಣ್ಣೂರು ಜಿಲ್ಲೆಯ ಪಯ್ಯನ್ನೂರಿನ ರಾಮಂತಳಿಯಲ್ಲಿ ನಡೆದಿದೆ.

ಮಗಳು ಹಿಮಾ(6), ಮಗ ಕಣ್ಣನ್‌ಗೆ (2) ವಿಷ ನೀಡಿದ ಬಳಿಕ ತಾಯಿ ಉಷಾ(65) ಜೊತೆಗೆ ಕಲಾಧರನ್(36) ನೇಣು ಬಿಗಿದುಕೊಂಡಿದ್ದಾನೆ. ರಾಮಂತಳಿಯ ಸೆಂಟ್ರಲ್ ನಿವಾಸಿ ಕಲಾಧರನ್ ಹಾಗೂ ಪತ್ನಿ ಜೊತೆಗಿರಲಿಲ್ಲ. ಎರಡು ಮಕ್ಕಳು ಕಲಾಧರನ್ ಜೊತೆಗಿದ್ದರು. ವಿಚ್ಛೇದನ ಕೇಸ್‌ ವಿಚಾರಣೆ ನಡೆಸಿದ ಕೋರ್ಟ್ ಇತ್ತೀಚೆಗೆ ಆದೇಶ ಹೊರಡಿಸಿ ಮಕ್ಕಳನ್ನು ಪತ್ನಿಯ ಸುಪರ್ದಿಗೆ ನೀಡಬೇಕೆಂದು ತಿಳಿಸಿತ್ತು.

ಮೂಲತಃ ರಾಮಂತಳಿಯ ಸೆಂಟ್ರಲ್ ನಿವಾಸಿಯಾಗಿದ್ದ ಕಲಾಧರನ್ ಅಡಿಗೆ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಸೋಮವಾರ (ಡಿ.22) ರಾತ್ರಿ ಈ ಘಟನೆ ನಡೆದಿದೆ.

ಪತಿ ಕಲಾಧರನ್ ಹಾಗೂ ಆತನ ಪತ್ನಿ ಜೊತೆಗಿರಲಿಲ್ಲ. ದಂಪತಿಯ ಎರಡು ಮಕ್ಕಳು ಕಲಾಧರನ್ ಜೊತೆಗಿದ್ದರು. ಈ ಕುರಿತ ಕೇಸ್ ಕೋರ್ಟ್‌ನಲ್ಲಿ ಬಾಕಿಯಿತ್ತು. ಇತ್ತೀಚಿಗಷ್ಟೇ ಕೋರ್ಟ್ ಆದೇಶ ಹೊರಡಿಸಿ, ಮಕ್ಕಳನ್ನು ಪತ್ನಿಯ ಸುಪರ್ದಿಗೆ ನೀಡಬೇಕೆಂದು ತಿಳಿಸಿತ್ತು. ಕೋರ್ಟ್ ತೀರ್ಪಿನ ಬಳಿಕ ಮಕ್ಕಳನ್ನು ತಕ್ಷಣ ತಮ್ಮ ಸುಪರ್ದಿಗೆ ನೀಡಬೇಕೆಂದು ಪತ್ನಿ ಪೊಲೀಸರನ್ನು ಭೇಟಿಯಾಗಿದ್ದರು. ಅದರಂತೆ ಇಂದು (ಡಿ.23) ಮಕಳನ್ನು ಪತ್ನಿಯ ವಶಕ್ಕೆ ಕೊಡುವಂತೆ ಕಲಾಧರನ್ ತಂದೆ ಉಣ್ಣಿಕೃಷ್ಣನ್‌ಗೆ ಪೊಲೀಸರು ಫೋನ್ ಮಾಡಿ ತಿಳಿಸಿದ್ದರು.

ಕೋರ್ಟ್ ಆದೇಶ ಪತಿ ಕಲಾಧರನ್‌ಗೆ ಒಪ್ಪಿಗೆ ಇರಲಿಲ್ಲ. ಹೀಗಾಗಿ ತನ್ನ ಎರಡು ಮಕ್ಕಳಿಗೂ ವಿಷವುಣಿಸಿ, ಬಳಿಕ ತಾಯಿಯ ಜೊತೆಗೆ ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆಟೋ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ ತಂದೆ ಉಣ್ಣಿಕೃಷ್ಣನ್ ರಾತ್ರಿ ಮನೆಗೆ ಬಂದಾಗ ಎಷ್ಟು ಕೂಗಿದರೂ ಯಾರು ಬಾಗಿಲು ತೆರೆಯಲಿಲ್ಲ. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಪೊಲೀಸರು ಬಂದು ಬಾಗಿಲು ತೆಗೆದ ಬಳಿಕ ಪ್ರಕರಣ ಬಯಲಾಗಿದೆ. ಪ್ರಕರಣದ ಕುರಿತು ದೂರು ದಾಖಲಿಸಿಕೊಂಡಿರುವ ರಾಮಂತಳಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.


Share It

You cannot copy content of this page