ಬೆಂಗಳೂರು: ಅಪ್ರಾಪ್ತ ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪಿಯಾಗಿದ್ದ ಚಿತ್ರದುರ್ಗ ಮುರುಘ ರಾಜೇಂದ್ರ ಶಿವಮೂರ್ತಿ ಸ್ವಾಮೀಜಿ ಸೇರಿ ಅಕ್ಕಮಹಾದೇವಿ ವಸತಿ ನಿಲಯದ ವಾರ್ಡನ್ ರಶ್ಮಿ ಹಾಗೂ ಮಠದ ಎ.ಜೆ.ಪರಮಶಿವಯ್ಯ ಅವರನ್ನು ಖುಲಾಸೆಗೊಳಿಸಿರುವ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ತೀರ್ಪು ರದ್ದು ಕೋರಿ ಪ್ರಕರಣದ ಸಂತ್ರಸ್ತ ಬಾಲಕಿಯರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಈ ಕುರಿತು ಇಬ್ಬರು ಸಂತ್ರಸ್ತ ಬಾಲಕಿಯರು ಮುರುಘಾಶ್ರೀ ಸೇರಿದಂತೆ ಮೂವರ ಖುಲಾಸೆ ಪ್ರಶ್ನಿಸಿ ಹೈಕೋರ್ಟ್‌ಗೆ ಕ್ರಿಮಿನಲ್ ಮೇಲ್ಮನವಿಯನ್ನು ಬುಧವಾರ ದಾಖಲಿಸಿದ್ದಾರೆ.
ಮೇಲ್ಮನವಿಯಲ್ಲಿ ಚಿತ್ರದುರ್ಗ ಗ್ರಾಮೀಣ ಪೊಲೀಸ್ ಠಾಣಾ ಪೊಲೀಸರು, ಖುಲಾಸೆಗೊಂಡಿರುವ ಆರೋಪಿಗಳಾದ ಮುರುಘ ರಾಜೇಂದ್ರ ಶಿವಮೂರ್ತಿ ಸ್ವಾಮೀಜಿ, ವಾರ್ಡನ್ ರಶ್ಮಿ ಹಾಗೂ ಎ.ಜೆ.ಪರಮಶಿವಯ್ಯ ಅವರನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ. ಮೇಲ್ಮನವಿ ಅರ್ಜಿ ವಿಚಾರಣೆಗೆ ನಿಗದಿಯಾಗಬೇಕಿದೆ.