ಬೆಂಗಳೂರು: ಹೊಸ ವರ್ಷಾಚರಣೆಯಲ್ಲಿ ಪಾಲ್ಗೊಳ್ಳು
ವವರ ಅನುಕೂಲಕ್ಕಾಗಿ ಡಿ. 31ರ ತಡರಾತ್ರಿವರೆಗೆ ನಗರದ ವಿವಿಧ ಪ್ರದೇಶಗಳಿಗೆ ಬಸ್ ಸೇವೆ ನೀಡಲು ಬಿಎಂಟಿಸಿ ನಿರ್ಧರಿಸಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ಬ್ರಿಗೇಡ್ ರಸ್ತೆ, ಎಂಜಿ ರಸ್ತೆ, ಸರ್ವಜ್ಞನಗರದ ಸ್ವಾಮಿ ವಿವೇಕಾನಂದ ಮೆಟ್ರೋ ನಿಲ್ದಾಣ ಮತ್ತು ಮೆಜೆಸ್ಟಿಕ್‌ನ ಕೆಂಪೇಗೌಡ ಬಸ್ ನಿಲ್ದಾಣದಿಂದ ವಿವಿಧ ಕಡೆಗಳಿಗೆ ರಾತ್ರಿ 11ರಿಂದ ತಡರಾತ್ರಿ 2ರವರೆಗೆ 70 ಬಸ್‌ಗಳು ಸೇವೆ ನೀಡಲಾಗುತ್ತಿದೆ.
ಈ ಬಸ್ ಗಳು ಎಲೆಕ್ಟ್ರಾನಿಕ್ ಸಿಟಿ, ಜಿಗಣಿ, ಸರ್ಜಾಪುರ, ಕೆಂಗೇರಿ, ನೆಲಮಂಗಲ, ಯಲಹಂಕ, ಹೊಸಕೋಟೆ, ಬನಶಂಕರಿ, ಸಿಲ್ಕ್ ಬೋರ್ಡ್, ಕೋರಮಂಗಲ ಸೇರಿದಂತೆ ಮತ್ತಿತರ ಕಡೆಗಳಿಗೆ ಸಂಚರಿಸಲಿವೆ ಎಂದು ಬಿಎಂಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.