ಬೆಂಗಳೂರು: ಡಿ.ಜೆ. ಹಳ್ಳಿ ಮತ್ತು ಕೆ.ಜಿ. ಹಳ್ಳಿ ಗಲಭೆ ಪ್ರಕರಣದ ಆರೋಪಿ ಅಫ್ಜಲ್ ಪಾಷಾ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಹೈಕೋರ್ಟ್ ಆದೇಶಿಸಿದೆ. ಆರೋಪಿ ಅಫ್ಜಲ್ ಪಾಷಾ ಕಳೆದ ಐದು ವರ್ಷಗಳಿಂದ ಜೈಲಿನಲ್ಲಿದ್ದಾನೆ.
ಪ್ರಕರಣ ಸಂಬಂಧ ಜಾಮೀನು ಕೋರಿ ಆರೋಪಿ ಅಫ್ಜಲ್ ಷಾಪಾ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಅರ್ಜಿದಾರ ಗಲಭೆಯಲ್ಲಿ ಪಾಲ್ಗೊಂಡಿ ರುವುದಕ್ಕೆ ಪ್ರಾಥಮಿಕ ಸಾಕ್ಷ್ಯಗಳಿವೆ. ಗಲಭೆ ಸಮಯ ದಲ್ಲಿ ಆರೋಪಿ ಡಿ.ಜೆ. ಹಳ್ಳಿ ಪೊಲಿಸ್ ಠಾಣೆ ವ್ಯಾಪ್ತಿ ಯಲ್ಲಿದ್ದ ಬಗ್ಗೆ ಟವರ್ ಲೊಕೇಷನ್ ಸಾಬೀತುಪಡಿಸಿದೆ.
ಪೊಲೀಸ್ ಠಾಣೆ ಧ್ವಂಸ, ಸಿಬ್ಬಂದಿ ಮೇಲೆ ಹಲ್ಲೆ ಮತ್ತು ಕೋಮು ಸೌಹಾರ್ದತೆಗೆ ಧಕ್ಕೆ ತರುವಂತಹ ಕೃತ್ಯದಲ್ಲಿ ತೊಡಗಿರುವುದು ಮೇಲ್ನೋಟಕ್ಕೆ ಕಂಡು ಬರುತ್ತದೆ. ಆದ್ದರಿಂದ ಅರ್ಜಿದಾರಗೆ ಜಾಮೀನು ನೀಡುವ ಅಗತ್ಯ ಕಂಡು ಬರುತ್ತಿಲ್ಲ ಎಂದು ಪೀಠ ಆದೇಶದಲ್ಲಿ ತಿಳಿಸಿದೆ.