ನವದೆಹಲಿ: ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸುವಾಗ ಯಾವ ಆಧಾರದಲ್ಲಿ ಅಥವಾ ಯಾವ ಕಾರಣಕ್ಕೆ ಆತನನ್ನು ಬಂಧಿಸಲಾಗುತ್ತಿದೆ ಎಂಬುದರ ಕುರಿತ ದಾಖಲೆಗಳನ್ನು ಒದಗಿಸಬೇಕು. ಇಲ್ಲದಿದ್ದರೆ ಆತನ ಪರಿಣಾಮಕಾರಿ ಪ್ರಾತಿನಿಧ್ಯ ಹಕ್ಕಿನ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗಲಿದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.
ಮಣಿಪುರ ಪೊಲೀಸರು ಬುಯಾ ಮಯುಮ್ ಅಬ್ದುಲ್ ಹನಾನ್ ಎಂಬಾತನನ್ನು ಮಾದಕ ದ್ರವ್ಯ ಹಾಗೂ ನಿದ್ರಾಜನ್ಯ ವಸ್ತುಗಳ ಅಕ್ರಮ ಸಾಗಣಿಕೆ ತಡೆ ಕಾಯ್ದೆಯಡಿ ಬಂಧಿಸಿದ್ದರು. ಇದನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದ ಅಬ್ದುಲ್ ಹನಾನ್, ಬಂಧನದ ವೇಳೆ ತನಗೆ ಅಧಿಕಾರಿಗಳು ಯಾವ ಕಾರಣಕ್ಕಾಗಿ ಬಂಧಿಸಲಾಗುತ್ತಿದೆ ಎಂಬುದರ ಕುರಿತ ದಾಖಲೆಗಳನ್ನುಯನ್ನು ಒದಗಿಸಿಲ್ಲ ಎಂದು ಆರೋಪಿಸಿದ್ದ. ಆತನ ಅರ್ಜಿಯನ್ನು ಹೈಕೋರ್ಟ್ ಮಾನ್ಯಮಾಡಿತ್ತು.
ಹೈಕೋರ್ಟ್ ನಿರ್ಧಾರ ಪ್ರಶ್ನಿಸಿ ಮಣಿಪುರ ಸರ್ಕಾರವು ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತ್ತು. ನ್ಯಾಯಮೂರ್ತಿಗಳಾದ ಅಜಯ್ ರಸ್ತೋಗಿ ಮತ್ತು ಸಿ.ಟಿ.ರವಿಕುಮಾರ್ ಅವರನ್ನೊಳಗೊಂಡ ದ್ವಿಸದಸ್ಯ ನ್ಯಾಯಪೀಠ ಮಣಿಪುರ ಸರ್ಕಾರದ ಮೇಲ್ಮನವಿಯನ್ನು ತಿರಸ್ಕರಿಸಿದೆ.