ಸುದ್ದಿ

ಅನಧಿಕೃತವಾಗಿ ನೌಕರಿಗೆ ಗೈರಾಗುವುದು ದುರ್ನಡತೆಗೆ ಸಮ; ಬಿಎಂಟಿಸಿ ಅರ್ಜಿ ಪುರಸ್ಕರಿಸಿದ ಹೈಕೋರ್ಟ್

Share It

ಬೆಂಗಳೂರು: ಪೂರ್ವಾನುಮತಿ ಇಲ್ಲದೆ ದೀರ್ಘಾವಧಿ ನೌಕರಿಗೆ ಗೈರಾಗುವುದು ಶಿಸ್ತಿನ ಉಲ್ಲಂಘನೆ. ಪ್ರಾಮಾಣಿಕವಾಗಿ ಕರ್ತವ್ಯಕ್ಕೆ ಹಾಜರಾಗದ ಉದ್ಯೋಗಿಗೆ ಸಹಾನುಭೂತಿ ತೋರುವ ಅಗತ್ಯವಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯ ಪಟ್ಟಿದೆ.

ಅನಧಿಕೃತವಾಗಿ ಉದ್ಯೋಗಕ್ಕೆ ಗೈರಾದ ಹಿನ್ನೆಲೆಯಲ್ಲಿ ಬಿಎಂಟಿಸಿಯಲ್ಲಿ ಟ್ರೈನಿ ಚಾಲಕನಾಗಿ ಕೆಲಸ ಮಾಡುತ್ತಿದ್ದ ವೆಂಕಟರಾಮಯ್ಯ ಎಂಬುವರನ್ನು ಸೇವೆಯಿಂದ ತೆಗೆದುಹಾಕಿದ್ದ ಆದೇಶ ರದ್ದುಪಡಿಸಿದ್ಧ ಕಾರ್ಮಿಕ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಬಿಎಂಟಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಈ ಅರ್ಜಿ ಪುರಸ್ಕರಿಸಿರುವ ನ್ಯಾಯಮೂರ್ತಿ ಎಂ.ಜ್ಯೋತಿ ಅವರ ಪೀಠ, ಪೂರ್ವಾನುಮತಿ ಮತ್ತು ರಜೆ ಪಡೆಯದೆ ವೆಂಕಟರಾಮಯ್ಯ 2016ರ ಡಿ.1ರ ನಂತರ ಅನಧಿಕೃತವಾಗಿ ಉದ್ಯೋಗಕ್ಕೆ ಗೈರಾಗಿದ್ದಾರೆ. ಈ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಬಿಎಂಟಿಸಿ ಸೇವೆಯಿಂದ ವಜಾಗೊಳಿಸಿದೆ. ಉದ್ಯೋಗ ನಿರ್ವಹಣೆ ವೇಳೆ ಸಕಾರಣವಿಲ್ಲದೆ ಉದ್ಯೋಗಕ್ಕೆ ನೌಕರ ಅನಧಿಕೃತವಾಗಿ ಗೈರಾಗಬಾರದು. ರಜೆಯಿಲ್ಲದೆ ಕರ್ತವ್ಯಕ್ಕೆ ಗೈರಾಗುವುದು ದುರ್ನಡತೆಯಾಗಲಿದೆ ಎಂದು ಕೋಟ್೯ ಸ್ಪಷ್ಟವಾಗಿ ಹೇಳಿದೆ.

ಯಾವುದೇ ಉದ್ಯೋಗಿ ಅನಧಿಕೃತವಾಗಿ ಗೈರಾಗುವುದು ಹಕ್ಕಲ್ಲ. ಇಲ್ಲಿ ಅನಧಿಕೃತವಾಗಿ ನೌಕರಿಗೆ ಗೈರಾಗಿರುವುದು ಸಾಬೀತಾದ ಹಿನ್ನೆಲೆಯಲ್ಲಿ ಶಿಕ್ಷೆ ನೀಡಲಾಗಿದೆ.ಯಾವುದೇ ಪೂರ್ವಾನುಮತಿ ಇಲ್ಲದೆ ದೀಘಾರ್ವಧಿ ಗೈರಾಗುವುದು ಕ್ಷಮಿಸುವ ಮಾನದಂಡವಲ್ಲ ಎಂದು ಪೀಠ ಸ್ಪಷ್ಟವಾಗಿ ಹೇಳಿದೆ.


Share It

You cannot copy content of this page