ಸುದ್ದಿ

ಸುಳ್ಳು ದಾಖಲೆ ಸೃಷ್ಟಿಸಿದ ಗ್ರಾಮ ಲೆಕ್ಕಾಧಿಕಾರಿ ಅಮಾನತು

Share It

ಬೆಳಗಾವಿ: ರೈತ ಬದುಕಿದ್ದಾಗಲೇ ಸತ್ತಿರುವುದಾಗಿ ಸುಳ್ಳು ದಾಖಲೆ ಸೃಷ್ಟಿಸಿ, ದೃಢೀಕರಿಸಿದ ಆರೋಪದ ಮೇಲೆ ಸವದತ್ತಿ ತಾಲ್ಲೂಕಿನ ಸುತಗಟ್ಟಿ ಗ್ರಾಮ ಲೆಕ್ಕಾಧಿಕಾರಿ ನೀಲಾ ಮುರಗೋಡ ಅವರನ್ನು ಅಮಾನತುಗೊಳಿಸಿ, ಜಿಲ್ಲಾಧಿಕಾರಿ ಬುಧವಾರ ಆದೇಶ ಹೊರಡಿಸಿದ್ದಾರೆ.

ಪುತ್ರ ಬಸವರಾಜ ಈರಪ್ಪ ಅಬ್ಬಾಯಿ ಅವರು ನಿಧನರಾದಾಗ, ಅವರ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ಪಡೆಯಲು ಅವರ ತಂದೆ ಈರಪ್ಪ ನಾಗಪ್ಪ ಅಬ್ಬಾಯಿ ಅರ್ಜಿಸಲ್ಲಿಸಿದ್ದರು. ಆದರೆ, ಅಧಿಕಾರಿಗಳು ಬಸವರಾಜ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ಕೊಡುವುದರ ಜೊತೆಗೆ ಅವರ ತಂದೆ ಈರಪ್ಪ ಅವರೂ ಮೃತಪಟ್ಟಿದ್ದಾರೆಂದು ಸುಳ್ಳು ದಾಖಲೆ ಸೃಷ್ಟಿಸಿದ್ದರು.
ಈ ಸಂಬಂಧ ಉಪ ಲೋಕಾಯುಕ್ತರು ನಾಲ್ವರು ಅಧಿಕಾರಿಗಳ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ.


Share It

You cannot copy content of this page