ಸುದ್ದಿ

ಉಗ್ರ ಸಂಘಟನೆಗೆ ಯುವಕರನ್ನು ಸೇರಿಸುತ್ತಿದ್ದವನಿಗೆ 10 ವರ್ಷ ಜೈಲು ಶಿಕ್ಷೆ ವಿಧಿಸಿದ ಕೋಟ್೯

Share It

ಶಿರಸಿ: ಉಗ್ರವಾದಿ ಚಟುವಟಿಕೆ ಪ್ರಕರಣದಲ್ಲಿ ಉತ್ತರ ಕನ್ನಡ ಜಿಲ್ಲೆಯ ಶಿರಸಿ ಮೂಲದ ಸೈಯದ್ ಎಂ.ಇದ್ರಿಸ್ (28) ಎಂಬಾತನಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ, 70,000 ದಂಡ ವಿಧಿಸಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ವಿಶೇಷ ನ್ಯಾಯಾಲಯವು ಆದೇಶಿಸಿದೆ.

ಅಪರಾಧಿ ಇದ್ರೀಸ್ ಪಾಕಿಸ್ತಾನ ಮೂಲದ ನಿಷೇಧಿತ ಉಗ್ರ ಸಂಘಟನೆ ಲಷ್ಕರ್-ಎ-ತೊಯ್ದಾಗೆ ಯುವಕರನ್ನು ಭರ್ತಿ ಮಾಡುವ ಮತ್ತು ಉಗ್ರ ಸಂಘಟನೆಗಳ ಸದಸ್ಯರಿದ್ದ ಸುಮಾರು 150 ಮಂದಿಯ ವಾಟ್ಸ್‌ಆಪ್ ಗ್ರೂಪ್‌ಗೆ ಸೇರಿದ್ದ. ಯುವಕರ ನೇಮಕಾತಿಗೆ ಸಂಬಂಧಿಸಿದಂತೆ ಅವರಿಗೆ ಹಣ ಸಂದಾಯವಾಗುತ್ತಿತ್ತು ಎಂಬ ಆರೋಪವೂ ಇದೆ.

ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳು ಹಾಗೂ ಕಾನೂನು ಬಾಹಿರ ಚಟುವಟಿಕೆಗಳ (ತಡೆ) ಕಾಯ್ದೆ ಅಡಿ ಈ ಶಿಕ್ಷೆಯನ್ನು ಜಾರಿಗೊಳಿಸಲಾಗಿದೆ.

2020ರ ಮಾರ್ಚ್‌ನಲ್ಲಿ ಪಶ್ಚಿಮ ಬಂಗಾಳದ ಬದುರಿಯಾ ಪೊಲೀಸ್ ಸ್ಟೇಷನ್‌ನಲ್ಲಿ ದಾಖಲಾದ ಪ್ರಕರಣವನ್ನು ಏಪ್ರಿಲ್‌ನಲ್ಲಿ ಎನ್‌ಐಎಗೆ ಹಸ್ತಾಂತರಿಸಲಾಗಿತ್ತು.

ತನಿಖೆಯಲ್ಲಿ ಅಪರಾಧಿ ಇದ್ರಿಸ್ ಪಾಕಿಸ್ತಾನ್ ಮೂಲದ ಹ್ಯಾಂಡ್ಲರ್‌ಗಳೊಂದಿಗೆ ಸಂಪರ್ಕ ಹೊಂದಿ, ಸಾಮಾಜಿಕ ಜಾಲತಾಣಗಳ ಮೂಲಕ ಮುಸ್ಲಿಂ ಯುವಕರನ್ನು ಉಗ್ರ ಸಂಘಟನೆಗೆ ಆಕರ್ಷಿಸುವುದು. ಸಾಮಾಜಿಕ ಜಾಲತಾಣಗಳ ಮೂಲಕ ಮುಸ್ಲಿಂ ಯುವಕರನ್ನು ಉಗ್ರ ಸಂಘಟನೆಗೆ ಆಕರ್ಷಿಸುವುದು, ರ್ಯಾಡಿಕಲೈಸ್ ಮಾಡುವುದು ಮತ್ತು ಭರ್ತಿ ಮಾಡುವ ಕೆಲಸದಲ್ಲಿ ಭಾಗಿಯಾಗಿದ್ದ ಆರೋಪ ಸಾಬೀತಾಗಿತ್ತು.


Share It

You cannot copy content of this page