ಪುಣೆ(ಮಹಾರಾಷ್ಟ್ರ): ಬಾರಾಮತಿಯಲ್ಲಿ ಮಹಾರಾಷ್ಟ್ರ
ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಪ್ರಯಾಣಿಸುತ್ತಿದ್ದ ವಿಮಾನ ಲ್ಯಾಂಡಿಂಗ್ ವೇಳೆ ಅಪಘಾತಕ್ಕೀಡಾಗಿದೆ. ವಿಮಾನದಲ್ಲಿದ್ದ ಡಿಸಿಎಂ ಅಜಿತ್ ಪವಾರ್ ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ. ಬುಧವಾರ ಬೆಳಗ್ಗೆ ಈ ದುರಂತ ಸಂಭವಿಸಿದೆ ಎಂದು ತಿಳಿದು ಬಂದಿದ್ದು ಡಿಸಿಎಂ ಅಜಿತ್ ಪವಾರ್ ಅವರೊಂದಿಗೆ ಅವರ ಭದ್ರತಾ ಸಿಬ್ಬಂದಿ ವಿಮಾನದಲ್ಲಿದ್ದರು ಡಿಜಿಸಿಎ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಜಿಲ್ಲಾ ಪಂಚಾಯತ್ ಚುನಾವಣೆ ಹಿನ್ನೆಲೆ ಇಂದು ಬಾರಾಮತಿ ಜಿಲ್ಲೆಯಲ್ಲಿ ನಡೆಯಲಿದ್ದ ಹಲವು ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಉಪಮುಖ್ಯಮಂತ್ರಿ ಅಜಿತ್ ಪವಾರ್ ಪಾಲ್ಗೊಳ್ಳಬೇಕಿತ್ತು. ಅಷ್ಟರಲ್ಲಿ ಈ ಭೀಕರ ಅವಘಡ ಸಂಭವಿಸಿದೆ.
ಮಹಾರಾಷ್ಟ್ರ ಉಪಮುಖ್ಯಮಂತ್ರಿ ವಿಎಸ್‌ಆರ್ ಏವಿಯೇಷನ್ ನಿರ್ವಹಿಸುವ ವಿಟಿ-ಎಸ್‌ಎಸ್‌ಕೆ ಲಿಯರ್‌ಜೆಟ್ – 45 ವಿಮಾನದಲ್ಲಿ ಸಿಬ್ಬಂದಿ ಸೇರಿದಂತೆ ಐದು ಜನರಿದ್ದರು ಎಂದು ಅಧಿಕಾರಿ ದೃಢಪಡಿಸಿದರು.
ಮಹಾರಾಷ್ಟ್ರ, ಉಪಮುಖ್ಯಮಂತ್ರಿ ಅಜಿತ್ ಪವಾರ್, ಇಬ್ಬರು ಸಿಬ್ಬಂದಿ (1 ಪಿಎಸ್‌ಒ ಮತ್ತು 1 ಅಟೆಂಡೆಂಟ್) ಮತ್ತಿಬ್ಬರು ಸಿಬ್ಬಂದಿ (ಪಿಐಸಿ+ಎಫ್‌ಒ) ಸದಸ್ಯರು ವಿಮಾನದಲ್ಲಿ ಇದ್ದರು ಎನ್ನಲಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ವಿಮಾನದಲ್ಲಿದ್ದ ಯಾರೂ ಅಪಘಾತದಲ್ಲಿ ಬದುಕುಳಿದಿಲ್ಲ” ಎಂದು ಡಿಜಿಸಿಎ ಅಧಿಕಾರಿ ಮಾಹಿತಿ ನೀಡಿದ್ದಾರೆ.