ಕಾನೂನು ಸುದ್ದಿ

ಮರಳು ಮಾಫಿಯಾ; ಸ್ವಯಂ ಪ್ರೇರಿತ ಪಿಐಎಲ್ ದಾಖಲಿಸಿಕೊಂಡ ಹೈಕೋರ್ಟ್; ಸರ್ಕಾರಕ್ಕೆ ನೋಟಿಸ್

Share It

ಬೆಂಗಳೂರು: ಎಲ್ಲ ಪಕ್ಷಗಳ ಪ್ರಭಾವಿ ವ್ಯಕ್ತಿಗಳು ಅಕ್ರಮ ಮರಳು ಸಾಗಣೆ ದಂಧೆಯಲ್ಲಿ ಭಾಗಿಯಾಗಿದ್ದಾರೆ’ ಎಂದು ಗೃಹ ಸಚಿವ ಪರಮೇಶ್ವರ ಸದನದಲ್ಲಿ ನೀಡಿದ್ದ ಹೇಳಿಕೆಯನ್ನು ಹೈಕೋರ್ಟ್ ಗಂಭೀರವಾಗಿ ಪರಿಗಣಿಸಿದ್ದು,ಕೋಟ್೯ ನಿಗಾವಹಿಸಿ ಸಿಬಿಐ ಅಥವಾ ಎಸ್‌ಐಟಿ ತನಿಖೆ ನಡೆಸುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿದೆ.

ಮಾಧ್ಯಮಗಳ ವರದಿ ಆಧರಿಸಿ, ಹಿರಿಯ ನ್ಯಾಯಮೂರ್ತಿ ಡಿ.ಕೆ.ಸಿಂಗ್ ಹಾಗೂ ನ್ಯಾಯಮೂರ್ತಿ ತಾರಾ ವಿತಸ್ತಾ ಗಂಜು ಅವರಿದ್ದ ವಿಭಾಗೀಯ ನ್ಯಾಯಪೀಠ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡಿದೆ.

ಈ ಸಂಬಂಧ ರಾಜ್ಯ ಸರ್ಕಾರಕ್ಕೆ ನೋಟಿಸ್‌ ಜಾರಿಗೊಳಿಸಲು ಆದೇಶಿಸಿರುವ ನ್ಯಾಯಪೀಠ, ನೋಟಿಸ್‌ಗೆ ಮೂರು ವಾರಗಳಲ್ಲಿ ಆಕ್ಷೇಪಣೆ ಸಲ್ಲಿಸಬೇಕು ಎಂದು ನಿರ್ದೇಶಿಸಿದೆ. ಅರ್ಜಿಯನ್ನು ಸೂಕ್ತ ನ್ಯಾಯಪೀಠದ ಮುಂದೆ ನಿಯೋಜನೆ ಮಾಡಲು ಮುಖ್ಯ ನ್ಯಾಯಮೂರ್ತಿ ಗಳ ಪೀಠಕ್ಕೆ ವರ್ಗಾವಣೆ ಮಾಡಿ ಆದೇಶಿಸಲಾಗಿದೆ.


Share It

You cannot copy content of this page