ದಾವಣಗೆರೆ: ಗಲಾಟೆ ಪ್ರಕರಣದ ಆರೋಪಿಗಳನ್ನು ಬಂಧಿಸಲು ಹೋದ ಪೊಲೀಸರ ಮೇಲೆ ಕಾಂಗ್ರೆಸ್‌ನ ಸ್ಥಳೀಯ ಮುಖಂಡ, ನಗರಾಭಿವೃದ್ಧಿ ಪ್ರಾಧಿಕಾರದ (ದೂಡಾ) ಮಾಜಿ ಅಧ್ಯಕ್ಷ ಆಯೂಬ್ ಪೈಲ್ವಾನ್ ಅವರ ಪುತ್ರರಿಬ್ಬರು ಶನಿವಾರ ಹಲ್ಲೆ ನಡೆಸಿದ್ದಾರೆ.
ಇಲ್ಲಿನ ಬಡಾವಣೆ ಠಾಣೆಯ ಇನ್‌ಸ್ಪೆಕ್ಟರ್ ಆರ್.ಗಾಯತ್ರಿ ಹಾಗೂ ಕಾನ್‌ಸ್ಟೆಬಲ್‌ಗಳಾದ ಕೆಂಚಪ್ಪ ಮತ್ತು ಹರೀಶ್ ಹಲ್ಲೆಗೊಳಗಾದವರು. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಹಲ್ಲೆಗೆ ಸಂಬಂಧಿಸಿದಂತೆ ಜಿಲ್ಲಾ ಉಸ್ತುವಾರಿ ಸಚಿವ ಮಲ್ಲಿಕಾರ್ಜುನ್ ಅವರ ಅಪ್ತ ಆಯೂಬ್ ಪೈಲ್ವಾನ್ ಅವರ ಪುತ್ರ ಹಸೇನ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.