ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ,ಉದ್ಯಮಿ ಸಿ.ಜೆ.ರಾಯ್ ಅವರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಕಾರಣ ಏನು ಎಂಬುದು ನಿಗೂಢವಾಗಿದ್ದು, ಈ ಪ್ರಕರಣವನ್ನು ಎಸ್‌ಐಟಿ ತನಿಖೆಗೆ ನೀಡಲಾಗಿದೆ.
ಗ್ರೂಪ್‌ನ ಕೇರಳ ವಿಭಾಗದ ವ್ಯವಸ್ಥಾಪಕ ನಿರ್ದೇಶಕ ಟಿ.ಎ.ಜೋಸೆಫ್ ಅವರ ದೂರು ಆಧರಿಸಿ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಬಿಎನ್ಎಸ್ ಕಾಯ್ದೆಯ ಸೆಕ್ಷನ್ 194/3(4) ಅಡಿ ಅನುಮಾನಾಸ್ಪದ ಸಾವು ಪ್ರಕರಣ ದಾಖಲಾಗಿತ್ತು.
ಈ ಪ್ರಕರಣದ ತನಿಖೆಗೆ ಪಶ್ಚಿಮ ವಲಯದ ಜಂಟಿ ಪೊಲೀಸ್ ಕಮಿಷನರ್ ಸಿ.ವಂಶಿಕೃಷ್ಣ ನೇತೃತ್ವದಲ್ಲಿ ಎಸ್‌ಐಟಿ ರಚಿಸಿ ನಗರ ಪೊಲೀಸ್ ಕಮಿಷನರ್ ಸೀಮಾಂತ್‌ಕುಮಾರ್ ಸಿಂಗ್ ಅವರು ಶನಿವಾರ ಆದೇಶಿಸಿದ್ದಾರೆ.