ಬೆಂಗಳೂರು : ಇತ್ತೀಚೆಗೆ ಚೀಟಿ ವ್ಯವಹಾರ ಸಂಬಂಧ
ಬೆದರಿಸಿ ₹4 ಲಕ್ಷ ಹಣ ವಸೂಲಿಗೆ ಯತ್ನಿಸಿ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಕೆ.ಪಿ. ಅಗ್ರಹಾರ ಠಾಣೆ ಇನ್ಸ್‌ಪೆಕ್ಟರ್ ಗೋವಿಂದರಾಜು ಪ್ರಕರಣದಲ್ಲಿ ಅದೇ ಠಾಣೆಯ ಇಬ್ಬರು ಕಾನ್‌ಸ್ಟೇಬಲ್‌ಗಳ ತಲೆದಂಡವಾಗಿದೆ.
ಈ ಪ್ರಕರಣದಲ್ಲಿ ಕರ್ತವ್ಯ ಲೋಪದ ಆರೋಪದ ಮೇರೆಗೆ ಕಾನ್‌ಸ್ಟೇಬಲ್ ಗಳನ್ನು ಪಶ್ಚಿಮ ವಿಭಾಗದ ಡಿಸಿಪಿ ಯತೀಶ್ ಅಮಾನತು ಗೊಳಿಸಿದ್ದಾರೆ. ಈ ಇಬ್ಬರ ವಿರುದ್ಧ ಇಲಾಖಾ ಮಟ್ಟದ ವಿಚಾರಣೆಗೆ ಸಹ ಆದೇಶವಾಗಿದೆ.
ಚೀಟಿ ವ್ಯವಹಾರ ಸಂಬಂಧ ಸುಳ್ಳು ಪ್ರಕರಣ ದಾಖಲಿಸಿ ಬೆದರಿಸಿ ₹4 ಲಕ್ಷ ರು. ಲಂಚಕ್ಕೆ ವಸೂಲಿಗೆ ಯತ್ನಿಸಿದ್ದ ಕೆ.ಪಿ.ಅಗ್ರಹಾರ ಠಾಣೆ ಇನ್ಸ್‌ಪೆಕ್ಟರ್ ಗೋವಿಂದರಾಜು ಅವರನ್ನು ಲೋಕಾಯುಕ್ತ ಪೊಲೀಸರು ಈಗಾಗಲೇ ಬಂಧಿಸಿದ್ದಾರೆ.