ಸುದ್ದಿ

ನಾಲ್ಕು ಸಾರಿಗೆ ನಿಗಮಗಳಲ್ಲಿ ಆದಾಯವಿಲ್ಲ: ಹೈಕೋರ್ಟ್ ನಲ್ಲಿ ಅಹವಾಲು ತೋಡಿಕೊಂಡ ನಿಗಮಗಳ ಪರ ವಕೀಲರು

Share It

ಬೆಂಗಳೂರು: ಕೋವಿಡ್ ಸಾಂಕ್ರಾಮಿಕದಿಂದ ಮೃತಪಟ್ಟ ನೌಕರರ ಕುಟುಂಬಗಳಿಗೆ ಪರಿಹಾರ ನೀಡಲು ನಮ್ಮ ಬಳಿ ಹಣವಿಲ್ಲ ಎಂದು ನಾಲ್ಕು ಸಾರಿಗೆ ನಿಗಮಗಳನ್ನು ಪ್ರತಿನಿಧಿಸಿರುವ ವಕೀಲರು ಹೈಕೋರ್ಟ್ ನಲ್ಲಿ ಅಹವಾಲು ತೋಡಿಕೊಂಡಿದ್ದಾರೆ.

  ಮೃತ ನೌಕರರಿಗೆ ₹30 ಲಕ್ಷ ಪರಿಹಾರ ನೀಡಲು ನಿರ್ದೇಶನ ನೀಡಬೇಕು ಎಂದು ಕೋರಿ ದಾವಣಗೆರೆಯ ತಾಹಿರ್ ಹುಸೇನ್ ಮತ್ತು ಇತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ನ್ಯಾ.ವಿಭು ಬಖ್ರು ಮತ್ತು ನ್ಯಾ.ಸಿ.ಎಂ.ಪೂಣಚ್ಚ ಅವರಿದ್ದ ವಿಭಾಗೀಯಪ ಪೀಠ ಬುಧವಾರ ವಿಚಾರಣೆ ನಡೆಸಿತು.

ರಾಜ್ಯ ಸರ್ಕಾರ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಟಿಕೆಟ್ ನೀಡಲಾಗುತ್ತಿದೆ. ಅದು ಹೇಗೆ ಕೆಲಸ ಮಾಡುತ್ತಿದೆಯೆಂದು ಪ್ರಶ್ನಿಸಿದ ನ್ಯಾಯಪೀಠ, ಸರ್ಕಾರ ಎಷ್ಟು ಹಣ ಬಾಕಿ ಉಳಿಸಿಕೊಂಡಿದೆ ಎಂಬ ವರದಿ ಸಲ್ಲಿಸುವಂತೆ ನಿರ್ದೇಶನ ನೀಡಿ ಮುಂದಿನ ವಿಚಾರಣೆಯನ್ನು ಮಾ.23ಕ್ಕೆ ಮುಂದೂಡಿತು.


Share It

You cannot copy content of this page