ಸುದ್ದಿ

ಜ್ಯೋತಿಷಿ ಕಮಲಾಕರ ಭಟ್ ವಿರುದ್ಧ ಪೋಕ್ಸೋ ಕೇಸ್: ಮತ್ತೊಂದು ಕರಾಳ ಮುಖ ಬಯಲು

Share It

ಉತ್ತರ ಕನ್ನಡ: ವಸಂತ ನಾಯ್ಕ್ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಜೈಲಿನಲ್ಲಿರುವ ಜ್ಯೋತಿಷಿ ಕಮಲಾಕರ ಭಟ್ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿ ಬಂದಿದ್ದು ಎಫ್ಐಆರ್ ದಾಖಲಾಗಿದೆ.

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪವಿದ್ದು ಈ ಸಂಬಂಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.ಅಪ್ರಾಪ್ತೆಯೋರ್ವಳು ದೂರು ನೀಡಿದ್ದಾಳೆ ಎಂದು ತಿಳಿದು ಬಂದಿದೆ.

ಉತ್ತರ ಕನ್ನಡದ ಸಿದ್ದಾಪುರ ತಾಲೂಕಿನ ಅವರಗುಪ್ಪದ ವಸಂತ ನಾಯ್ಕ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ಜ್ಯೋತಿಷಿ ಕಮಲಾಕರ ಭಟ್, ಪ್ರೇಯಸಿ ಸುಚಿತ್ರಾ ಸೇರಿ ಐದು ಜನರು ಈಗಾಗಲೇ ಜೈಲಿನಲ್ಲಿದ್ದಾರೆ.


Share It

You cannot copy content of this page