ಹಾಸನ: ಹೃದಯಾಘಾತದಿಂದ ಪಾಠ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ವಿದ್ಯಾರ್ಥಿಗಳ ಮುಂದೆಯೇ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕರೊಬ್ಬರು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಅರಕಲಗೂಡು ತಾಲೂಕಿನ ಕೆಬ್ಬೆಕೊಪ್ಪಲು ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಕೇರಳಾಪುರ ಗ್ರಾಮದ ಸತೀಶ್ (53) ಎಂದು ಗುರುತಿಸಲಾಗಿದೆ. ಅವರು ಕೆಬ್ಬೆಕೊಪ್ಪಲು ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದರು.ತರಗತಿಯಲ್ಲಿ ವಿದ್ಯಾರ್ಥಿಗಳಿಗೆ ಪಾಠ ಮಾಡುತ್ತಿದ್ದ ವೇಳೆ ಸತೀಶ್ ಏಕಾಏಕಿ ಅಸ್ವಸ್ಥಗೊಂಡು ತರಗತಿ ಕೊಠಡಿಯಲ್ಲೇ ಕುಸಿದು ಬಿದ್ದಿದ್ದಾರೆ. ತಕ್ಷಣ ವಿದ್ಯಾರ್ಥಿಗಳು ಹಾಗೂ ಸಹ ಶಿಕ್ಷಕರು ತಕ್ಷಣವೇ ನೆರವಿಗೆ ಧಾವಿಸಿ ಅಂಬ್ಯುಲೆನ್ಸ್‌ಗೆ ಕರೆ ಮಾಡಿದ್ದಾರೆ. ಆದರೆ ತೀವ್ರ ಹೃದಯಾಘಾತದಿಂದಾಗಿ ಅವರು ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ.
ಶಿಕ್ಷಕರ ಅಕಾಲಿಕ ನಿಧನದಿಂದ ಊರಿನ ಗ್ರಾಮಸ್ಥರು, ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಕಣ್ಣೀರಿಟ್ಟಿದ್ದಾರೆ. ಶಿಕ್ಷಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿ, ಕುಟುಂಬಸ್ಥರಿಗೆ ಸಾಂತ್ವನ ತಿಳಿಸಿದ್ದಾರೆ.