ಸುದ್ದಿ

​ಯೋಗೇಶ್ ಗೌಡ ಕೊಲೆ ಪ್ರಕರಣ: ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿದಂತೆ 17 ಆರೋಪಿಗಳು ದೋಷಿ

Share It

ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿದ್ದ ಧಾರವಾಡದ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿದಂತೆ ಇತರ ಆರೋಪಿಗಳನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ದೋಷಿಗಳು ಎಂದು ಮಹತ್ವದ ತೀರ್ಪು ನೀಡಿದೆ.

​ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು ಇಂದು ಈ ಆದೇಶವನ್ನು ಪ್ರಕಟಿಸಿದರು. ಆರೋಪಿಗಳು ವ್ಯವಸ್ಥಿತವಾಗಿ ಕ್ರಿಮಿನಲ್ ಪಿತೂರಿ ನಡೆಸಿ ಕೊಲೆ ಮಾಡಿರುವುದು ಸಾಕ್ಷ್ಯಾಧಾರಗಳಿಂದ ಸ್ಪಷ್ಟವಾಗಿ ದೃಢಪಟ್ಟಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು, ಈ ಆದೇಶ ಪ್ರಕಟಿಸಿದರು. ಶಿಕ್ಷೆಯ ಪ್ರಮಾಣವನ್ನು ನಾಳೆ ಪ್ರಕಟಿಸುವುದಾಗಿ ತಿಳಿಸಿ, ವಿಚಾರಣೆ ಮುಂದೂಡಿದ್ದಾರೆ. ಆದೇಶದ ಪ್ರತಿ ಇನ್ನಷ್ಟೇ ಲಭ್ಯವಾಗಬೇಕಾಗಿದೆ.

ಪ್ರಕರಣದಲ್ಲಿ ಆರೋಪಿಗಳು ಕ್ರಿಮಿನಲ್ ಪಿತೂರಿ ನಡೆಸಿ ಕೊಲೆ ಮಾಡಿರುವ ಅಂಶವು ಸಾಕ್ಷ್ಯಾಧಾರಗಳಿಂದ ಗೊತ್ತಾಗಿದ್ದು, ಶಿಕ್ಷೆ ವಿಧಿಸುತ್ತಿರುವುದಾಗಿ ನ್ಯಾಯಾಲಯ ಹೇಳಿದೆ.

​ಪ್ರಕರಣದ ಹಿನ್ನೆಲೆ: ​ 2016ರ ಜೂನ್ 15ರಂದು ಧಾರವಾಡದ ತಮ್ಮ ಜಿಮ್‌ನಲ್ಲಿ ಯೋಗೇಶ್ ಗೌಡ ಅವರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದರು.

ಪ್ರಾರಂಭದಲ್ಲಿ ಸ್ಥಳೀಯ ಪೊಲೀಸರು ತನಿಖೆ ನಡೆಸಿದ್ದರೂ, ನಂತರ ಪ್ರಕರಣದ ಗಂಭೀರತೆ ಪರಿಗಣಿಸಿ ಇದನ್ನು ಸಿಬಿಐಗೆ ವಹಿಸಲಾಗಿತ್ತು. ಸಿಬಿಐ ತನಿಖೆಯ ವೇಳೆ ವಿನಯ್ ಕುಲಕರ್ಣಿ ಅವರ ಪಾತ್ರವಿರುವುದು ಬೆಳಕಿಗೆ ಬಂದು ಅವರನ್ನು ಬಂಧಿಸಲಾಗಿತ್ತು.

2026ರ ಜನವರಿಯಲ್ಲಿ ಹೈಕೋರ್ಟ್ ಇವರ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಬಳಿಕ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದ ಕುಲಕರ್ಣಿ ಅವರಿಗೆ ಫೆಬ್ರವರಿ 27ರಂದು ಜಾಮೀನು ಮಂಜೂರಾಗಿತ್ತು.


Share It

You cannot copy content of this page