ಸುದ್ದಿ

ಮೊಬೈಲ್‌ನಲ್ಲಿ ಮಕ್ಕಳ ಅಶ್ಲೀಲ ಫೋಟೋ ಮತ್ತು ವಿಡಿಯೋ ಸಂಗ್ರಹಿಸಿಡುವುದು ಪೋಕ್ಸೋ ಕಾಯ್ದೆಯಡಿ ಅಪರಾಧ

Share It

ಬೆಂಗಳೂರು: ಮಕ್ಕಳ ಅಶ್ಲೀಲ ಚಿತ್ರ ಮತ್ತು ವಿಡಿಯೋಗಳನ್ನು ಮೊಬೈಲ್ ಪೋನ್‌ನಲ್ಲಿ ಸಂಗ್ರಹಿಸಿಡುವುದೂ ಸಹ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸ್‌) ಕಾಯ್ದೆ ಮತ್ತು ಮಾಹಿತಿ ತಂತ್ರಜ್ಞಾನ (ಐಟಿ) ಕಾಯ್ದೆಯಡಿ ಅಪರಾಧವಾಗಲಿದೆ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.

ಮೊಬೈಲ್‌ನಲ್ಲಿ ಮಕ್ಕಳ ಅಶ್ಲೀಲ ಚಿತ್ರ ಮತ್ತು ವಿಡಿಯೋಗಳನ್ನು ಸಂಗ್ರಹಿಸಿದ್ದ ಆರೋಪದಲ್ಲಿ ಪೋಕ್ಸೋ ಕಾಯ್ದೆಯ ಸೆಕ್ಷನ್ 15 ಮತ್ತು ಐಟಿ ಕಾಯ್ದೆಯ ಸೆಕ್ಷನ್ 67(ಬಿ) ಅಡಿಯಲ್ಲಿ ದಾಖಲಾಗಿರುವ ಎಫ್‌ಐಆ‌ರ್ ಮತ್ತದಕ್ಕೆ ಸಂಬಂಧಿಸಿದ ವಿಚಾರಣಾ ನ್ಯಾಯಾಲಯದ ಪ್ರಕ್ರಿಯೆ ರದ್ದು ಕೋರಿ ಕೇರಳದ ತ್ರಿಶೂರು ಜಿಲ್ಲೆಯ ಪಿ.ಜೆ. ಬಿನೋಜ್ (38) ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ವಜಾಗೊಳಿಸಿದೆ.


Share It

You cannot copy content of this page