ಉತ್ತರ ಪ್ರದೇಶ: ಅಯೋಧ್ಯೆ ಶ್ರೀರಾಮ
ಮಂದಿರದ ಹುಂಡಿ ಕಳವು ಪ್ರಕರಣ ಸಂಬಂಧ ಶ್ರೀರಾಮ ಜನ್ಮಭೂಮಿ ತೀರ್ಥ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ಅವರು ನೈತಿಕ ಹೊಣೆ ಹೊತ್ತು ಇಂದು ರಾಜೀನಾಮೆ ನೀಡಿದ್ದಾರೆ.
ರಾಮ ಮಂದಿರದಲ್ಲಿನ ಹುಂಡಿ ಕಳವು ಆರೋಪ ಸಂಬಂಧ ಎಫ್‌ಐಆರ್ ದಾಖಲಾದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ರಾಜ್ಯ ಸರ್ಕಾರದ ನಿರ್ದೇಶನದ ಮೇರೆಗೆ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್)ಯ ಸೆಕ್ಷನ್ 306, 316(5), 317(4), 317(5), 61 ಮತ್ತು 3(5) ಸೇರಿದಂತೆ ಹಲವಾರು ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
8 ಮಂದಿ ಆರೋಪಿಗಳ ವಿರುದ್ಧ ಎಫ್ಐಆರ್ ಮತ್ತು ಬಂಧನ:
ರಾಮಶಂಕರ್ ಯಾದವ್ ಅಲಿಯಾಸ್ ಟಿನ್ನು, ಅನುಕಲ್ಸ್ ಮಿಶ್ರಾ, ಅವಿನಾಶ್ ಶುಕ್ಲಾ, ಕರುಣೇಶ್ ಪಾಂಡೆ, ಮನೀಶ್ ಯಾದವ್, ಲವಕುಶ್ ಮಿಶ್ರಾ, ರಾಮ ಶಂಕರ್ ಮಿಶ್ರಾ ಮತ್ತು ಸುಭಾಷ್ ಶ್ರೀವಾಸ್ತವ ವಿರುದ್ಧ ಎಫ್‌ಐಆರ್ ದಾಖಲಿಸಿ, ಬಂಧಿಸಲಾಗಿದೆ. ರಾಮ ಮಂದಿರದ 7ರಿಂದ 7.5 ಕೋಟಿ ರೂ.ವರೆಗೆ ದೇಣಿಗೆ ಕಳುವಾಗಿದೆ.ಎಂದು ಅಯೋಧ್ಯೆಯ ಸಮಾಜವಾದಿ ಪಕ್ಷದ ಮಾಜಿ ಶಾಸಕ ಪವನ್ ಪಾಂಡೆ ಆರೋಪಿಸಿದ ನಂತರ ಈ ಕ್ರಮ ಕೈಗೊಳ್ಳಲಾಗಿದೆ.
ಈ ಆರೋಪಗಳಿಗೆ ಪ್ರತಿಕ್ರಿಯೆಯಾಗಿ, ರಾಜ್ಯ ಸರ್ಕಾರ ಜೂನ್ 14ರಂದು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಕೋರಿಕೆಯ ಮೇರೆಗೆ ಆಪಾದಿತ ಹಗರಣದ ತನಿಖೆಗಾಗಿ ಮೂವರು ಸದಸ್ಯರ ವಿಶೇಷ ತನಿಖಾ ತಂಡ(ಎಸ್‌ಐಟಿ) ರಚಿಸಿದೆ.