ಸುದ್ದಿ

₹5.50 ಲಕ್ಷ ರು. ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕೆಎಎಸ್ ಅಧಿಕಾರಿ ಕಾವ್ಯರಾಣಿ

Share It

ಹುಣಸೂರು ಮೈಸೂರು ಜಿಲ್ಲೆ, ಹುಣಸೂರು
ಉಪವಿಭಾಗಾಧಿಕಾರಿ ಕಾವ್ಯಾರಾಣಿ ಮತ್ತು ಅವರ ಆಪ್ತಸಹಾಯಕ ಶಿವಕುಮಾರ್ ಸೋಮವಾರ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಉಪವಿಭಾಗಾಧಿಕಾರಿ ನ್ಯಾಯಾಲಯದಲ್ಲಿ ಒಂದು ವರ್ಷದಿಂದ ಎಚ್‌.ಡಿ.ಕೋಟೆ ತಾಲ್ಲೂಕಿನ ಸ.ನಂ.17/26ರ 4 ಎಕರೆ 20 ಗುಂಟೆ ಭೂಮಿಗೆ ಸಂಬಂಧಿಸಿದ ಪ್ರಕರಣದ ವಿಚಾರಣೆ ನಡೆಯುತಿತ್ತು. ಇದಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ನಿವಾಸಿ ಡಾ.ರೂಪಾ ಅವರ ಬಳಿ ಉಪವಿಭಾಗಧಿಕಾರಿ ₹10.50 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು. ಈ ಪೈಕಿ ಮೊದಲ ಕಂತಾಗಿ ₹ 5 ಲಕ್ಷ ತೆಗೆದುಕೊಂಡಿದ್ದರು.

2ನೇ ಕಂತು ₹ 5.50 ಲಕ್ಷವನ್ನು ಕೊಡುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಉಪವಿಭಾಗಾಧಿಕಾರಿಯು ಹಣವನ್ನು ಮನೆಯಲ್ಲಿ ಪಡೆಯುವಾಗ ಸಿಕ್ಕಿಬಿದ್ದಿದ್ದಾರೆ. ದೂರು ಆಧರಿಸಿ ಕಾರ್ಯಾಚರಣೆ ಕೈಗೊಂಡಾಗ ಇಬ್ಬರು ಅಧಿಕಾರಿಗಳು ಬಲೆಗೆ ಬಿದ್ದಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆ‌ರ್ ದಾಖಲಿಸಿ, ನಿಯಮಾನುಸಾರ ಕ್ರಮ ಕೈಗೊಂಡು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಲೋಕಾಯುಕ್ತ ಡಿವೈಎಸ್‌ಪಿ ಶೈಲೇಂದ್ರ ತಿಳಿಸಿದ್ದಾರೆ.


Share It

You cannot copy content of this page