ಸುದ್ದಿ

ಲಂಚ ಪಡೆಯುವಾಗ ರೆಡ್‌ಹ್ಯಾಂಡ್ಆಗಿ ಲೋಕಾ ಬಲೆಗೆ ಬಿದ್ದ ಹಳೇಬೀಡು ಪಿಎಸ್ಐ

Share It

ಹಾಸನ ಜಿಲ್ಲೆಯ ಹಳೇಬೀಡು ಪೊಲೀಸ್ ಠಾಣೆಯ ಪಿಎಸ್‌ಐ ಮಂಜುನಾಥ್, ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ದೂರುದಾರರಿಂದ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ದೂರುದಾರರ ದೂರಿನ ಮೇರೆಗೆ ಪಕ್ಕಾ ಪ್ಲಾನ್ ಮಾಡಿ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು, ಲಂಚದ ಹಣದ ಸಮೇತ ಅಧಿಕಾರಿಯನ್ನು ರೆಡ್-ಹ್ಯಾಂಡಾಗಿ ಬಂಧಿಸಿದ್ದಾರೆ.

ಹಳೇಬೀಡು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ನಾನ್-ಕಾನ್ಸಿಡೆನ್ಶಿಯಲ್ ರಿಪೋರ್ಟ್ (NCR) ಒಂದನ್ನು ಇತ್ಯರ್ಥಪಡಿಸಲು ಪಿಎಸ್‌ಐ ಮಂಜುನಾಥ್ ದೂರುದಾರರಿಂದ ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಲಂಚ ನೀಡಲು ಇಷ್ಟವಿಲ್ಲದ ದೂರುದಾರರು ಈ ಕುರಿತು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.

ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದ ಅಧಿಕಾರಿ:

ದೂರಿನ ಆಧಾರದ ಮೇಲೆ ಕಾರ್ಯಾಚರಣೆ ರೂಪಿಸಿದ ಲೋಕಾಯುಕ್ತ ತಂಡ, ಮುಂಗಡವಾಗಿ ₹20,000 ಲಂಚದ ಹಣವನ್ನು ಪಡೆದುಕೊಳ್ಳುತ್ತಿದ್ದ ವೇಳೆ ಪಿಎಸ್‌ಐ ಅವರನ್ನು ಹಣದ ಸಮೇತ ವಶಕ್ಕೆ ಪಡೆದಿದೆ. ಲೋಕಾಯುಕ್ತ ಎಸ್‌ಪಿ ನಂದಿನಿ ಅವರ ಮಾರ್ಗದರ್ಶನದಲ್ಲಿ, ಇನ್‌ಸ್ಪೆಕ್ಟರ್‌ಗಳಾದ ಶಿಲ್ಪಾ ಹಾಗೂ ಗವಿರಾಜು ಅವರ ನೇತೃತ್ವದ ತಂಡ ಹಳೇಬೀಡು ಪೊಲೀಸ್‌ ಠಾಣೆಯಲ್ಲೇ ಈ ದಾಳಿ ನಡೆಸಿದೆ.

ಲೋಕಾಯುಕ್ತ ಅಧಿಕಾರಿಗಳು ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪಿಎಸ್ಐ ಮಂಜುನಾಥ್ ಅವರನ್ನು ವಿಚಾರಣೆಗೆ ಒಳಪಡಿಸಲಾಗಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.


Share It

You cannot copy content of this page