ಉತ್ತರಾಖಂಡದ ಬದರಿನಾಥ ಧಾಮದಿಂದ ಫಾಟಾ ಕಡೆಗೆ ತೆರಳುತ್ತಿದ್ದ ಹೆಲಿಕಾಪ್ಟರ್ ಜೋಶಿಮಠದ ಸಮೀಪ ಪತನಗೊಂಡು ಸಂಭವಿಸಿದ ಭೀಕರ ದುರಂತದಲ್ಲಿ ಬೆಂಗಳೂರಿನ ಪೊಲೀಸ್ ಇನ್ಸ್‌ಪೆಕ್ಟರ್ ಸೇರಿದಂತೆ ಆರು ಮಂದಿ ದುರಂತ ಅಂತ್ಯಕಂಡಿದ್ದಾರೆ.
ಸ್ನೇಹಿತರು ಹಾಗೂ ಕುಟುಂಬಸ್ಥರೊಂದಿಗೆ ಚಾರ್‌ಧಾಮ್ ಯಾತ್ರೆಗೆ ತೆರಳಿದ್ದ ಅರುಣ್ ಸಾಲಂಕಿ ಅವರು ಹೆಲಿಕಾಪ್ಟರ್ ದುರಂತದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಅವರ ಅಕಾಲಿಕ ನಿಧನದ ಸುದ್ದಿ ಕುಟುಂಬಸ್ಥರು, ಸ್ನೇಹಿತರು ಹಾಗೂ ಪೊಲೀಸ್ ಇಲಾಖೆಯ ಸಹೋದ್ಯೋಗಿಗಳಿಗೆ ತೀವ್ರ ಆಘಾತ ಉಂಟುಮಾಡಿದೆ
ಬದರಿನಾಥ್‌ನಿಂದ ಡೆಹ್ರಾಡೂನ್‌ಗೆ ತೆರಳುತ್ತಿದ್ದ ಹೆಲಿಕಾಪ್ಟರ್ ಜೋಶಿಮಠ ಸಮೀಪದ ಚಮೋಲಿ ಜಿಲ್ಲೆಯ ಚಾಯ್ ಗ್ರಾಮದ ಬಳಿ ಪತನಗೊಂಡಿದೆ.
ಬದರಿನಾಥ್‌ನಿಂದ ಡೆಹ್ರಾಡೂನ್‌ಗೆ ತೆರಳುತ್ತಿದ್ದ ಟ್ರಾನ್ಸ್ ಭಾರತ್ ಏವಿಯೇಷನ್ ಸಂಸ್ಥೆಗೆ ಸೇರಿದ ಹೆಲಿಕಾಪ್ಟರ್ ಹವಾಮಾನ ವೈಪರಿತ್ಯದಿಂದಾಗಿ ಪತನಗೊಂಡಿದೆ.
ಅಕ್ಟೋಬರ್ 30ರಂದು ಮಧ್ಯಾಹ್ನ 1.14ಕ್ಕೆ ಬದರಿನಾಥ್‌ನಿಂದ ಹೊರಟಿದ್ದ ಟ್ರಾನ್ಸ್ ಭಾರತ್ ಏವಿಯೇಷನ್ ಸಂಸ್ಥೆಯ VT-HCX ಹೆಲಿಕಾಪ್ಟರ್, ಜೋಶಿಮಠ ಕಣಿವೆಯ ಮೇಲೆ ಹಾರುತ್ತಿದ್ದಾಗ ಸಂಪರ್ಕ ಕಳೆದುಕೊಂಡಿತ್ತು. ಬಳಿಕ ಅದರ ಟ್ರ್ಯಾಕಿಂಗ್ ವ್ಯವಸ್ಥೆಯೂ ಕಾರ್ಯನಿರ್ವಹಿಸುವುದನ್ನು ನಿಲ್ಲಿಸಿತ್ತು. ಮಧ್ಯಾಹ್ನ ಸುಮಾರು 2.20ರ ವೇಳೆಗೆ ಹೆಲಿಕಾಪ್ಟರ್ ಪತನಗೊಂಡಿರುವುದು ವರದಿಯಾಗಿದೆ.
ದುರಂತ ಸಂಭವಿಸಿದ ದಿನವೇ ಚಮೋಲಿ ಜಿಲ್ಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿತ್ತು. ಗುಡುಗು, ಮಿಂಚು, ಆಲಿಕಲ್ಲು ಮಳೆ ಹಾಗೂ ಗಂಟೆಗೆ 40ರಿಂದ 50 ಕಿ.ಮೀ. ವೇಗದ ಗಾಳಿಯ ಮುನ್ಸೂಚನೆ ನೀಡಲಾಗಿತ್ತು. ಬದರಿನಾಥ್-ಜೋಶಿಮಠ ಮಾರ್ಗದಲ್ಲೂ ಮಳೆ ಮತ್ತು ಹಿಮಪಾತದ ಸಾಧ್ಯತೆಯಿತ್ತು. ಪ್ರತಿಕೂಲ ಹವಾಮಾನ ದುರಂತಕ್ಕೆ ಕಾರಣವಾಗಿದೆಯೇ ಎಂಬುದು ತನಿಖೆಯಿಂದಷ್ಟೇ ತಿಳಿಯಬೇಕಿದೆ.
ದುರಂತದಲ್ಲಿ ಮೃತರಾದವರನ್ನು ಬೆಂಗಳೂರಿನ ಸಿಸಿಬಿ ಇನ್ಸ್‌ಪೆಕ್ಟರ್ ಅರುಣ್ ಸಾಲಂಕೆ, ಎಚ್ ಎಸ್ ನಟರಾಜ್, ಶಂಕರಗೌಡ,ಸುಧೀರ್ ಕೆ. ಪ್ರತಾಪ್ ಗೌಡ
ಪೈಲಟ್ ಕ್ಯಾಪ್ಟನ್ ಹಿಮಾಂಶು ಸಬರ್ವಾಲ್ ಎಂದು ತಿಳಿದು ಬಂದಿದೆ.
ಹೆಲಿಕಾಪ್ಟರ್ ಪತನದ ಸುದ್ದಿ ತಿಳಿಯುತ್ತಿದ್ದಂತೆ ಉತ್ತರಾಖಂಡದ ಜಿಲ್ಲಾಡಳಿತ, ಪೊಲೀಸರು, ಸೇನೆ, ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ಮತ್ತು ಇಂಡೋ-ಟಿಬೆಟನ್ ಗಡಿ ಪೊಲೀಸ್ ಪಡೆ (ಐಟಿಬಿಪಿ) ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡವು. ಬಳಿಕ ಆರು ಮಂದಿಯೂ ಮೃತಪಟ್ಟಿರುವುದು ದೃಢಪಟ್ಟಿದೆ.